ಇಂದು ಮತ್ತೆ ದೆಹಲಿಯತ್ತ ಸಿದ್ದರಾಮಯ್ಯ, ಡಿಕೆಶಿ

ಬೆಂಗಳೂರು: ಸಚಿವರ ಪಟ್ಟಿ ಅಂತಿಮಕ್ಕೆ ಸರ್ಕಸ್ ನಡೆಯುತ್ತಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಂದು ಮತ್ತೆ ದೆಹಲಿಗೆ ತೆರಳಲಿದ್ದಾರೆ.
ಸಚಿವರ ಆಯ್ಕೆಗೆ ಇಂದು ದೆಹಲಿಯಲ್ಲಿ ನಾಯಕರ ಕಸರತ್ತು ನಡೆಸಲಿದ್ದಾರೆ. ಸಂಪುಟರಚನೆಯ ಬಗ್ಗೆ ಹೈವೋಲ್ಟೇಜ್ ಮೀಟಿಂಗ್ ಇದ್ದು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಹೈಕಮಾಂಡ್ ಜೊತೆ ಚರ್ಚೆ ಮಾಡಲಿದ್ದಾರೆ. ಕರ್ನಾಟಕ ಸಿಎಂ ಗಾದಿಗಾಗಿ ಕಳೆದ 4-5 ದಿನಗಳಿಂದ ದೆಹಲಿಯಲ್ಲಿ ಭಾರೀ ಹೈಡ್ರಾಮ ನಡೆದಿತ್ತು. ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ಪಟ್ಟು ಹಿಡಿದಿದ್ದರು. ಹೈಕಮಾಂಡ್ ಎಷ್ಟು ಮನವೊಲಿಸಿದರೂ ಬಗ್ಗಿರಲಿಲ್ಲ. ಕೆಲ ಷರತ್ತುಗಳೊಂದಿಗೆ ಕೊನೆಗೂ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಲು ಡಿಕೆಶಿ ಒಪ್ಪಿಗೆ ಸೂಚಿಸಿದರು. ತಾವು ಡಿಸಿಎಂ ಪಟ್ಟ ಪಡೆದರು.
ಅತ್ತ ಸಿದ್ದರಾಮಯ್ಯ ಸಿಎಂ ಎಂಬುದು ಖಚಿತವಾಗುತ್ತಿದ್ದಂತೆ ಇತ್ತ ಡಾ. ಪರಮೇಶ್ವರ್ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರ ಮುಂದೆ ಸರ್ಕಾರ ರಚನೆ ಕುರಿತು ಮಾಹಿತಿ ನೀಡಿದರು. ಇದೇ ಮೇ 20 ರಂದು ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ನಾಯಕರು ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳನ್ನೂ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw