ಪ್ರಧಾನಿ ಮೋದಿಯನ್ನು ತನ್ನೊಂದಿಗೆ ಓಟದ ಸ್ಪರ್ಧೆಗೆ ಆಹ್ವಾನಿಸಿದ ಸಿದ್ದರಾಮಯ್ಯ! - Mahanayaka
5:14 AM Wednesday 5 - February 2025

ಪ್ರಧಾನಿ ಮೋದಿಯನ್ನು ತನ್ನೊಂದಿಗೆ ಓಟದ ಸ್ಪರ್ಧೆಗೆ ಆಹ್ವಾನಿಸಿದ ಸಿದ್ದರಾಮಯ್ಯ!

siddaramaiha
30/04/2023

ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಜೊತೆಗೆ ಓಟದ ಸ್ಪರ್ಧೆಗೆ ಆಹ್ವಾನಿಸಿದ್ದು, ಪ್ರಧಾನಿ ಮೋದಿ ಅವರು ಸಿದ್ಧವಿದ್ದರೆ ನಾನು ಅವರ ಜೊತೆಗೆ ಓಟದ ಸ್ಪರ್ಧೆಗೆ ಸಿದ್ಧ ಎಂದಿದ್ದಾರೆ.

ಯಡಿಯೂರಪ್ಪನವರು ವಯಸ್ಸಿನ ಕಾರಣಕ್ಕಾಗಿ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ  ವಿಚಾರವನ್ನು ಪ್ರಸ್ತಾಪಿಸಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ನರೇಂದ್ರ ಮೋದಿಯವರು ಏನನ್ನು ಹೇಳಲಿಕ್ಕೆ ಹೊರಟಿದ್ದಾರೆ? ಬಿ.ಎಸ್.ಯಡಿಯೂರಪ್ಪ ಅವರನ್ನು ವಯಸ್ಸಿನ ಕಾರಣಕ್ಕಾಗಿ ಮುಖ್ಯಮಂತ್ರಿ ಸ್ಥಾನದಿಂದ ಅವಮಾನಕಾರಿಯಾಗಿ ಕಿತ್ತುಹಾಕಿದ ಬಿಜೆಪಿ, ಈಗ ಅವರನ್ನೇ ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿರುವುದಕ್ಕೆ ಕಾರಣ ಅವರ ಮೇಲಿನ ಗೌರವವೇ? ಅಥವಾ ಅನುಕಂಪ ಗಳಿಕೆಯ ತಂತ್ರವೇ? ಎಂದು ಪ್ರಶ್ನಿಸಿದ್ದಾರೆ.

ನಾನು ನಿವೃತ್ತಿಯಾಗುತ್ತೇನೆ ಎಂದು ಹೇಳುತ್ತಿರುವುದು ಚುನಾವಣಾ ರಾಜಕಾರಣದಿಂದಲೇ ಹೊರತು, ಸಕ್ರಿಯ ರಾಜಕಾರಣದಿಂದ ಅಲ್ಲ. ರಾಜಕೀಯದಲ್ಲಿ ಸಕ್ರಿಯವಾಗಿರುವಷ್ಟು ಆರೋಗ್ಯದಿಂದ ಇದ್ದೇನೆ.  ಮೋದಿಯವರು ಸಿದ್ಧ ಇದ್ದರೆ ಅವರ ಜೊತೆಯಲ್ಲಿ ಓಟದ ಸ್ಪರ್ಧೆಗೆ ನಾನು ಸಿದ್ಧ ಎಂದು ಸವಾಲು ಹಾಕಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ