ಸಿದ್ದರಾಮಯ್ಯ ಅವರಿಗೆ ಭಯ ಹುಟ್ಟಿಕೊಂಡಿದೆ: ಸಿಎಂ ಬೊಮ್ಮಾಯಿ - Mahanayaka

ಸಿದ್ದರಾಮಯ್ಯ ಅವರಿಗೆ ಭಯ ಹುಟ್ಟಿಕೊಂಡಿದೆ: ಸಿಎಂ ಬೊಮ್ಮಾಯಿ

banglore
20/04/2023

ಬೆಂಗಳೂರು:ಒಳ ಮೈತ್ರಿ, ಹೊರ ಮೈತ್ರಿ ಎಂದು ಮಾತನಾಡುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಭಯ ಹುಟ್ಟಿಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ವರುಣಾದಲ್ಲಿ ಬಿಜೆಪಿ– ಜೆಡಿಎಸ್ ಒಳಮೈತ್ರಿ ಎಂದು ಸಿದ್ದರಾಮಯ್ಯ ಅವರು ಮಾಡಿರುವ ಆರೋಪದ ಬಗ್ಗೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.


Provided by

ಎಲ್ಲ ಪಕ್ಷಗಳಿಂದಲೂ ಅಭ್ಯರ್ಥಿಗಳು ಫಿಕ್ಸ್ ಆಗಿದಾರೆ ಎಂಬ ಭಯವಿದ್ದು, ಅವರಿಬ್ಬರೂ ಸೇರಿಕೊಂಡಿದ್ದಾರೆ ಎಂಬ ಭಯ ಬಂದಿದೆ ಎಂದ ಅವರು, ಎಲ್ಲ ಅಭ್ಯರ್ಥಿಗಳೂ ತಾವೇ ಗೆಲ್ಲಬೇಕು ಎಂದು ಚುನಾವಣೆಯಲ್ಲಿ ನಿಲ್ಲುತ್ತಾರೆ ಎಂದರು.

ಸ್ವಂತ ಬಲದಿಂದ ಗೆಲ್ಲುತ್ತೇನೆ:


Provided by

ಯಾರೂ ಸೇರಿಕೊಂಡರೂ ಸಿದ್ದರಾಮಯ್ಯ ಅವರಿಗೆ ಸ್ವಂತ ಬಲ ಇದ್ದರೆ ಗೆಲ್ಲುತ್ತಾರೆ. ಇಲ್ಲದಿದ್ದರೆ ಗೆಲ್ಲುವುದಿಲ್ಲ. ನನ್ನ ಕ್ಷೇತ್ರ ಶಿಗ್ಗಾಂವಿಯಲ್ಲೂ ಕಾಂಗ್ರೆಸ್–ಜೆಡಿಎಸ್ ಸೇರಿಕೊಂಡಿದ್ದಾರೆ. ಇದರಿಂದ ನನಗೇನೂ ಭಯವಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಬದಲಾಯಿಸಿದ್ದು ನನ್ನ ಮೇಲೆ ವ್ಯತ್ಯಾಸ ಆಗುವುದಿಲ್ಲ. ಎಲ್ಲರೂ ಕಾಂಗ್ರೆಸ್ ಗೆ ಪ್ರಯತ್ನ ಮಾಡ್ತಿದ್ರು, ಕಾಂಗ್ರೆಸ್ ನ ಒಬ್ಬರಿಗೆ ಜೆಡಿಎಸ್ ಟಿಕೆಟ್ ಕೊಟ್ಟಿದೆ. ಇದನ್ನು ನಾನು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಎನ್ನಲಾ? ನಾನು ಈ ಥರ ಆರೋಪ ಎಲ್ಲ ಮಾಡುವುದಿಲ್ಲ ಎಂದರು. ಯಾರು ಯಾರ ಜತೆಗಾದರೂ ಸೇರಿಕೊಳ್ಳಲಿ. ನಾನು ನನ್ನ ಸ್ವಂತ ಬಲದಿಂದ ಗೆಲ್ಲುತ್ತೇನೆ ಎಂದರು.

ಕ್ಷೇತ್ರದೊಳಗೆ ಅನಿಶ್ಚಿತತೆ:

ಸಿದ್ದರಾಮಯ್ಯ ವರುಣಾದಿಂದ ಆರೇಳು ಸಲ ಗೆದ್ದು ಬಂದವರು.ಈ ಮೊದಲು ಅವರಿಗೆ ಕ್ಷೇತ್ರದ ಅನಿಶ್ಚಿತತೆ ಇತ್ತು. ಈಗ ಕ್ಷೇತ್ರದ ಒಳಗಡೆ ಅನಿಶ್ಚಿತತೆ ಇದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ