ಸಿದ್ದರಾಮಯ್ಯನವರ ನಾಲಿಗೆಯಲ್ಲಿ ಉಲ್ಟಾ ಮಚ್ಚೆ ಇದೆ ಎಂದ ಸಿ.ಟಿ.ರವಿ - Mahanayaka

ಸಿದ್ದರಾಮಯ್ಯನವರ ನಾಲಿಗೆಯಲ್ಲಿ ಉಲ್ಟಾ ಮಚ್ಚೆ ಇದೆ ಎಂದ ಸಿ.ಟಿ.ರವಿ

siddaramaiha c t ravi
15/08/2021

ಚಿಕ್ಕಮಗಳೂರು: ಸಿದ್ದರಾಮಯ್ಯನವರ ನಾಲಿಗೆಯಲ್ಲಿ ಉಲ್ಟಾ ಮಚ್ಚೆ ಇದೆ ಹಾಗಾಗಿ ಅವರು ಹೇಳುತ್ತಿರುವುದೆಲ್ಲವೂ ಉಲ್ಟಾ ಆಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಲೇವಡಿ ಮಾಡಿದ್ದು, ಸಿದ್ದರಾಮಯ್ಯನವರು ಇಲ್ಲಿಯವರೆಗೆ ಹೇಳಿದ್ದೆಲ್ಲವೂ ಉಲ್ಟಾ ಆಗಿದೆ ಮುಂದೆಯೂ ಉಲ್ಟಾ ಆಗಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದರು. ಆದರೆ ಎರಡನೇ ಅವಧಿಗೆ ಮೋದಿ ಪ್ರಧಾನಿ ಆದರು.  2018ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದರು. ಅದೂ ಸಾಧ್ಯವಾಗಿಲ್ಲ. ತಾನು ಮತ್ತೊಮ್ಮೆ ಸಿಎಂ ಆಗಲಿದ್ದೇನೆ ಎಂದರು ಅದು ಕೂಡ ಸಾಧ್ಯವಾಗಿಲ್ಲ ಎಂದು ಸಿ.ಟಿ.ರವಿ ಹೇಳಿದರು.

ಸಿದ್ದರಾಮಯ್ಯನವರು ಈಗ ಕಾಂಗ್ರೆಸ್ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೆ, ಬಿಜೆಪಿ ಉಳಿಯುವುದಿಲ್ಲ ಎಂದು ಹೇಳುತ್ತಿದ್ದಾರೆ. ಅಂದರೆ, ನೂರಕ್ಕೆ ನೂರು ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ ಎಂದರ್ಥ ಎಂದು ಅವರು ಹೇಳಿದರು.

ಸಿದ್ದರಾಮಯ್ಯನವರು ಈ ಹಿಂದಿನಿಂದಲೂ ನೀಡಿರುವ ಹೇಳಿಕೆಗೆ ವಿರುದ್ಧವಾಗಿಯೇ ಎಲ್ಲವೂ ನಡೆದಿದೆ. ಹಾಗಾಗಿ ಸಿದ್ದರಾಮಯ್ಯನವರ ನಾಲಿಗೆಯಲ್ಲಿ ಉಲ್ಟಾ ಮಚ್ಚೆ ಇದೆ. ಹಾಗಾಗಿ ಅವರು ಹೇಳಿದ್ದೆಲ್ಲವೂ ಉಲ್ಟಾ ಆಗುತ್ತಿದೆ ಎಂದು ಸಿ.ಟಿ.ರವಿ ವ್ಯಂಗ್ಯವಾಡಿದರು.

ಇನ್ನಷ್ಟು ಸುದ್ದಿಗಳು…

ಸವರ್ಣೀಯರಿಂದ ಶೋಷಿತರಿಗೆ ಇನ್ನೂ ಸ್ವಾತಂತ್ರ್ಯ ದೊರೆತಿಲ್ಲ | ಅಂಬೇಡ್ಕರ್ ಸೇನೆ

ಮೊಟ್ಟೆ ವಿಚಾರ: ಧ್ವಜಾರೋಹಣಕ್ಕೆ ಬಂದ ಸಚಿವೆ ಶಶಿಕಲಾ ಜೊಲ್ಲೆಗೆ ಮುತ್ತಿಗೆ ಹಾಕಿದ ಮಹಿಳೆಯರು!

ಸ್ವಾತಂತ್ರ್ಯ ದಿನಾಚರಣೆ: ಗಾಂಧಿ, ಭಗತ್ ಸಿಂಗ್, ಅಂಬೇಡ್ಕರರನ್ನು ನೆನೆದ ಪ್ರಧಾನಿ ನರೇಂದ್ರ ಮೋದಿ

ಎಸ್ ಸಿ-ಎಸ್ ಟಿಗಳ ಜಾತಿ ನಿಂದನೆ ಮಾಡಿದ ನಟಿ ಅರೆಸ್ಟ್: ಬಂಧನದ ವೇಳೆ ನಟಿಯಿಂದ ಹೈಡ್ರಾಮಾ

ಎಲ್ಲಾ ಜಾತಿಯವರೂ ಅರ್ಚಕ ಹುದ್ದೆ ಪಡೆಯಲು ಅರ್ಹರು: ಕ್ರಾಂತಿಕಾರಿ ಹೆಜ್ಜೆಯಿಟ್ಟ ಎಂ.ಕೆ.ಸ್ಟ್ಯಾಲಿನ್

ಹಿಂದಿನ ನಿಯಮಗಳೇ ಮುಂದುವರಿಕೆ: ಪಾಸಿವಿಟಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ತೆರೆಯಲು ನಿರ್ಧಾರ | ಸಿಎಂ ಬೊಮ್ಮಾಯಿ

ಇತ್ತೀಚಿನ ಸುದ್ದಿ