2 ಸಾವಿರ ನೋಟು ನಿಷೇಧ ವಿರುದ್ಧ ಸಿದ್ದರಾಮಯ್ಯ ಕಿಡಿ

2 ಸಾವಿರ ಮುಖ ಬೆಲೆಯ ನೋಟುಗಳನ್ನು ವಾಪಸ್ ಪಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಇದರ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗ ರೂ.2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, 2016ರಲ್ಲಿ ರೂ.500 ಮತ್ತು ರೂ.1000 ನೋಟುಗಳನ್ನು ನಿಷೇಧ ಮಾಡಿದಾಗ ತಿಳಿಸಿದ್ದ ಯಾವ ಉದ್ದೇಶಗಳು ಈಡೇರಿವೆ ಎನ್ನುವುದನ್ನು ದೇಶದ ಜನರಿಗೆ ಮೊದಲು ತಿಳಿಸಬೇಕು ಎಂದು ಅವರು ಪ್ರಶ್ನಿಸಿದ್ದಾರೆ.
ರೂ.2000 ಮೌಲ್ಯದ ನೋಟು ನಿಷೇಧಿಸುವುದಿದ್ದರೆ 2016ರಲ್ಲಿ ಅದನ್ನು ಚಲಾವಣೆಗೆ ತಂದದ್ದು ಯಾಕೆ? ಯಾವ ಕಾರಣಕ್ಕಾಗಿ ಈಗ ಇದನ್ನು ನಿಷೇಧಿಸಲಾಗಿದೆ? ಕಪ್ಪು ಹಣವನ್ನು ನಿಯಂತ್ರಿಸುವ ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಮೋದಿಯವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw