ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆ: ಪ್ರಧಾನಿಗೆ ಪತ್ರ ಬರೆಯುವಷ್ಟು ಇಲ್ಲಿ ಭ್ರಷ್ಟಾಚಾರ ಆಗಿದೆ! - Mahanayaka
7:24 PM Saturday 14 - December 2024

ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆ: ಪ್ರಧಾನಿಗೆ ಪತ್ರ ಬರೆಯುವಷ್ಟು ಇಲ್ಲಿ ಭ್ರಷ್ಟಾಚಾರ ಆಗಿದೆ!

narendra modi
08/05/2023

ರಾಜ್ಯ ಸಂಚರಿಸಿ ರೋಡ್ ಶೋ, ರ್ಯಾಲಿ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಇಲ್ಲಿನ ಸಮಸ್ಯೆಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆಗಳನ್ನು ಕೇಳಿದ್ದಾರೆ.

ಪ್ರಧಾನ ಮಂತ್ರಿಯವರು ಕರ್ನಾಟಕದಲ್ಲಿಯೇ ಠಿಕಾಣಿ ಹೂಡಿ ಬಾಯ್ತುಂಬಾ ಮಾತನಾಡುತ್ತಿದ್ದಾರೆ. ಆದರೆ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರು ಪ್ರಧಾನಿಗಳಿಗೇ ಪತ್ರ ಬರೆಯುವಷ್ಟು ಭ್ರಷ್ಟಾಚಾರ ಇಲ್ಲಿ ತಾರಕಕ್ಕೇರಿದೆ.ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಾನಗಳ ನಗರ, ಸಿಲಿಕಾನ್ ಸಿಟಿ, ಐಟಿ-ಬಿಟಿ ರಾಜಧಾನಿ, ಸ್ಟಾರ್ಟ್ಅಪ್ ರಾಜಧಾನಿ ಎಂದೆಲ್ಲ ಖ್ಯಾತಿ ಗಳಿಸಿತ್ತು. ಬಿಜೆಪಿ ಸರ್ಕಾರದ ಕಾಲದಲ್ಲಿ ಗುಂಡಿಬಿದ್ದ ರಸ್ತೆಗಳು, ನೆರೆನೀರಿನಲ್ಲಿ ಮುಳುಗುವ ಮನೆಗಳು, ಅಪರಾಧಿಗಳ ಜಗತ್ತಿನ ರಾಜಧಾನಿ ಎಂಬ ಕುಖ್ಯಾತಿ ಗಳಿಸಿದೆ.

ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಮಶೀಲರ ಆಸಕ್ತಿಯ ನಂಬರ್ ಒನ್ ತಾಣವಾಗಿತ್ತು. ಬಿಜೆಪಿ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಮಶೀಲರ ಆಸಕ್ತಿಯ ನಗರಗಳ ಪಟ್ಟಿಯಲ್ಲಿ ಹದಿನೇಳನೇ ಸ್ಥಾನಕ್ಕೆ ಕುಸಿದಿದೆ.

ಅಪರಾಧ ಸಂಖ್ಯೆಗಳ ಹೆಚ್ಚಳ, ಕುಸಿದುಬಿದ್ದಿರುವ ಮೂಲಸೌಕರ್ಯ ವ್ಯವಸ್ಥೆ ಮತ್ತು ಗುಂಡಿಬಿದ್ದ ರಸ್ತೆಗಳಿಂದಾಗಿ ಜಾಗತಿಕ ವಾಸಯೋಗ್ಯ ಸೂಚ್ಯಂಕದಲ್ಲಿ ಬೆಂಗಳೂರು ಕನಿಷ್ಠ ಶ್ರೇಣಿಗೆ ತಲುಪಿದೆ.

ಕಳೆದ ಮೂರು ವರ್ಷಗಳಲ್ಲಿ ಕೇವಲ ಗುಂಡಿಬಿದ್ದ ರಸ್ತೆಗಳಿಂದಾಗಿ 31 ಮಂದಿಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಬಿಬಿಎಂಪಿ ಕೇವಲ ರಸ್ತೆ ಗುಂಡಿಮುಚ್ಚಲು ರೂ.7,121 ಖರ್ಚು ಮಾಡಿದರೂ ಇನ್ನೂ ನೂರಾರು ಹಳೆಯ ಗುಂಡಿಗಳು ಉಳಿದಿವೆ, ಹೊಸ ಗುಂಡಿಗಳು ತಯರಾಗುತ್ತಿವೆ.

ಶೇಕಡಾ 48ರಷ್ಟು ವಾಹನದಟ್ಟಣೆಯ ಪ್ರಮಾಣದಿಂದಾಗಿ ಬೆಂಗಳೂರು ನಗರ ದೇಶದಲ್ಲಿ ಎರಡನೇ ಅತ್ಯಂತ ಹೆಚ್ಚು ವಾಹನ ದಟ್ಟಣೆಯ ನಗರ ಎಂಬ ಕುಖ್ಯಾತಿಗೆ ಒಳಪಟ್ಟಿದೆ. ಇದರಿಂದಾಗಿ ನಗರವಾಸಿಗಳು ಮನೆಗಿಂತ ಹೆಚ್ಚಿನ ಸಮಯ ರಸ್ತೆಯಲ್ಲಿ ಕಳೆಯುವಂತಾಗಿದೆ.ಎನ್.ಸಿ.ಆರ್.ಬಿ ವರದಿ ಪ್ರಕಾರ ದೇಶದ ಮೆಟ್ರೋಪಾಲಿಟನ್ ನಗರಗಳಲ್ಲಿ ನಡೆಯುವ ಅಪರಾಧಗಳ ಪೈಕಿ 72% ಕಳ್ಳತನಗಳು ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಕಾರಣ ಬೆಂಗಳೂರು ನಗರ ಈಗ ಅಪರಾಧಗಳ ತಾಣವಾಗಿದೆ.

ಎನ್.ಸಿ.ಆರ್.ಬಿ ವರದಿ ಪ್ರಕಾರ ದೇಶದ ಮೆಟ್ರೋಪಾಲಿಟನ್ ನಗರಗಳಲ್ಲಿ ನಡೆಯುವ ಅಪರಾಧಗಳ ಪೈಕಿ 72% ಕಳ್ಳತನಗಳು ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಕಾರಣ ಬೆಂಗಳೂರು ನಗರ ಈಗ ಅಪರಾಧಗಳ ತಾಣವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ