ವಾರ್ ಗೆ ಸಿದ್ಧವಾದ ಸಿದ್ದರಾಮಯ್ಯ: ಕೋಲಾರದಲ್ಲಿ ವಾರ್ ರೂಮ್ ಕಾರ್ಯಾರಂಭ
ಚುನಾವಣಾ ಕಾರ್ಯತಂತ್ರ, ಪ್ರಚಾರದ ರೂಪುರೇಷೆ ಸಿದ್ಧಪಡಿಸುವ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಾರ್ ರೂಮ್ ಕೋಲಾರದಲ್ಲಿ ಇಂದಿನಿಂದ ಕಾರ್ಯಾರಂಭ ಮಾಡಿದೆ.
ಟೇಕಲ್ ರಸ್ತೆಯಲ್ಲಿ ಆರಂಭವಾಗಿರುವ ವಾರ್ ರೂಮ್ ನ್ನು ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದ ಕಣಕ್ಕಿಳಿಯಲು ಸಿದ್ದರಾಮಯ್ಯ ಅವರು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಾರ್ ರೂಮ್ ಕಾರ್ಯಾರಂಭ ಮಾಡಿದೆ.
ವಾರ್ ರೂಮ್ ಉದ್ಘಾಟನೆ ವೇಳೆ ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಶಾಸಕರಾದ ಶ್ರೀನಿವಾಸಗೌಡ, ನಂಜೇಗೌಡ, ಬೈರತಿ ಸುರೇಶ್, ಅನಿಲ್ ಕುಮಾರ್, ನಸೀರ್ ಅಹಮದ್ ಸೇರಿದಂತೆ ಪಕ್ಷದ ಹಲವಾರು ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ಬೆಂಗಳೂರಿನ ಚುನಾವಣಾ ತಂತ್ರಗಾರಿಕೆ ತಂಡ ಪೋಲ್ ಹೌಸ್ ಕೋಲಾರ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದು, ಮುಂದಿನ ಮೂರು ತಿಂಗಳು ಕೋಲಾರದ ವಾರ್ ರೂಮ್ ಅನ್ನು ನಿರ್ವಹಿಸಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw