ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆದ್ದರೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಲಿದ್ದಾರೆ: ಡಾ.ಯತೀಂದ್ರ ಸಿದ್ದರಾಮಯ್ಯ - Mahanayaka

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆದ್ದರೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಲಿದ್ದಾರೆ: ಡಾ.ಯತೀಂದ್ರ ಸಿದ್ದರಾಮಯ್ಯ

siddaramaiah
17/01/2024

ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಇರಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರು ಹೋಬಳಿಯ ಅಣ್ಣೇಚಾಕನಹಳ್ಳಿ ಗ್ರಾಮದಲ್ಲಿ ಇಂದು ನಡೆದ ಶ್ರೀ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5 ವರ್ಷ ಅವರು ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ನೈತಿಕವಾಗಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಬೆಂಬಲ ಸಿಗಲಿದೆ. ಗ್ಯಾರಂಟಿ ಯೋಜನೆಗಳಿಗೆ ವರ್ಷಕ್ಕೆ 56 ಸಾವಿರ ಕೋಟಿ ರೂಪಾಯಿ ಖರ್ಚು ಆಗುತ್ತದೆ. ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣವನ್ನು ಖರ್ಚು ಮಾಡಿಲ್ಲ. ಇಷ್ಟೊಂದು ಹಣ ಖರ್ಚು ಮಾಡುತ್ತಿರುವಾಗ ಜನರ ಬೆಂಬಲ ಬೇಕು. ಆಗ ಸಿದ್ದರಾಮಯ್ಯ 5 ವರ್ಷ ಗ್ಯಾರಂಟಿ ಯೋಜನೆ ಮುಂದುವರಿಸುತ್ತಾರೆ ಎಂದು ಅವರು ಹೇಳಿದರು.

 

ಇತ್ತೀಚಿನ ಸುದ್ದಿ