ಉಪ ಚುನಾವಣೆ ಬಳಿಕ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಇಳಿಯಲಿದ್ದಾರೆ: ಶಾಸಕ ಜನಾರ್ದನರೆಡ್ಡಿ - Mahanayaka
6:16 PM Thursday 26 - December 2024

ಉಪ ಚುನಾವಣೆ ಬಳಿಕ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಇಳಿಯಲಿದ್ದಾರೆ: ಶಾಸಕ ಜನಾರ್ದನರೆಡ್ಡಿ

janardhana reddy
08/11/2024

ಬಳ್ಳಾರಿ: ಸಿಎಂ ಸಿದ್ದರಾಮಯ್ಯರನ್ನು ಉಪ ಚುನಾವಣೆಯ ಬಳಿಕ ಸಿಎಂ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್ ಸೂಚನೆ ನೀಡಿದೆ ಎಂದು ಶಾಸಕ ಜನಾರ್ದನರೆಡ್ಡಿ ಹೇಳಿದರು.

ಸಂಡೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಬಳ್ಳಾರಿ, ಸಂಡೂರು ಜಿಲ್ಲೆಗೆ ಅವರ ಕೊಡುಗೆ ಏನು ಇಲ್ಲ. ಕುಡಿಯುವ ನೀರು, ಕೆರೆಗಳನ್ನು ನಿರ್ಮಾಣ ಮಾಡಿ, ತುಂಗಭದ್ರಾ ನೀರು ಹರಿಸಿ ಮನೆ ಮನೆಗೆ ನೀರು ಕೊಟ್ಟಿದ್ದೀವಿ. ಬಳ್ಳಾರಿ ನಗರ ಮೊದಲು ಹೇಗಿತ್ತು? ಈಗ ಹೇಗಾಗಿದೆ? ನಾವೆಲ್ಲ ಅಭಿವೃದ್ಧಿ ಮಾಡಿದ್ದೇವೆ ಎಂದು ಅವರು ಹೇಳಿದರು.

ಸಂಡೂರಿನಲ್ಲಿ ನಾವು ಗೆಲ್ಲದೇ ಇದ್ದರೂ 250 ಕೋಟಿ ರೂ. ರಸ್ತೆಗೆ ನೀಡಿದ್ದೇವೆ. ರೆಡ್ಡಿ ಬಗ್ಗೆ ಮಾತನಾಡದೇ ಇರಲು ಆಗುವುದಿಲ್ಲ, ಅಭಿವೃದ್ಧಿ ಕೆಲಸ ಏನೂ ಮಾಡಿಲ್ಲ ಎನ್ನುವ ಕಾರಣಕ್ಕೆ ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ಒಬ್ಬರ ಜೇಬಿಗೆ ಕತ್ತರಿ ಹಾಕಿಲ್ಲ, ಮೋಸ ಮಾಡಿಲ್ಲ ಎಂದು ತಿಳಿಸಿದರು.

ಸಿದ್ದರಾಮಯ್ಯ ಅಹಂಕಾರಿ ಮನುಷ್ಯ, ನಾನು 1 ಲಕ್ಷ ಕೋಟಿ ರೂ. ಲೂಟಿ ಮಾಡಿದ್ದೇನೆ ಎಂದು ಆರೋಪ ಮಾಡುತ್ತಾರೆ. ಸಿಎಂ ಹುಚ್ಚರಾಗಿದ್ದಾರೆ ಅವರ ಯುಪಿಎ ಸರ್ಕಾರ ಇದ್ದಾಗ ಏನು ಕಿತ್ತುಕೊಳ್ಳಲು ಆಗಲಿಲ್ಲ. ಈಗ ಏನು ಮಾತಾಡುತ್ತೀರಾ? ಅವರಿಗೆ ನೆಮ್ಮದಿ ಕದಡಿದೆ. ರಾತ್ರಿ ಸರಿಯಾಗಿ ನಿದ್ದೆಯೂ ಮಾಡಲ್ಲ. ಯಾವಾಗ ಅರೆಸ್ಟ್ ಆಗುತ್ತೀನೋ ಎನ್ನುವ ಭೀತಿಯಲ್ಲಿ ಬದುಕುತ್ತಿದ್ದಾರೆ ಎಂದು ಅವರು ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

 

ಇತ್ತೀಚಿನ ಸುದ್ದಿ