ರಾಜ್ಯದ ನೂತನ ಸಿಎಂ ಆಗಿ‌ ಸಿದ್ದರಾಮಯ್ಯ‌ ನಾಳೆ ಪ್ರಮಾಣ ವಚನ ಸ್ವೀಕಾರ - Mahanayaka
2:22 AM Thursday 12 - December 2024

ರಾಜ್ಯದ ನೂತನ ಸಿಎಂ ಆಗಿ‌ ಸಿದ್ದರಾಮಯ್ಯ‌ ನಾಳೆ ಪ್ರಮಾಣ ವಚನ ಸ್ವೀಕಾರ

siddaramaiha
17/05/2023

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ‌‌ ಕಾಂಗ್ರೆಸ್‌ ಹಿರಿಯ ನಾಯಕ ಸಿದ್ದರಾಮಯ್ಯರನ್ನು ಎಐಸಿಸಿ ಆಯ್ಕೆ ಮಾಡಿದೆ‌. ಸಿದ್ದರಾಮಯ್ಯನವರ ಪ್ರಮಾಣ ವಚನ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಸಲು ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ಮಧ್ಯಾಹ್ನ 3:30ಕ್ಕೆ ಸಿದ್ದರಾಮಯ್ಯ ಮತ್ತು ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾದ ಬೆನ್ನಲ್ಲೇ ಅಧಿಕಾರಿಗಳು ಸಿದ್ಧತೆಗಾಗಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು, ಅಭಿಮಾನಿಗಳ ಮುಂದೆ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಮತ್ತು ಕಾಂಗ್ರೆಸ್‌ ನ ಬೆಂಬಲಿತ ಬೇರೆ ರಾಜ್ಯದ ಮುಖ್ಯಮಂತ್ರಿಗಳು ಆಗಮಿಸುವ ಸಾಧ್ಯತೆಯಿದೆ.

2013 ರಲ್ಲೂ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂನಲ್ಲೇ ಪ್ರಮಾಣವಚನ ಸ್ವೀಕರಿಸಿ 5 ವರ್ಷ ಅಧಿಕಾರ ನಡೆಸಿದ್ದರು. ಈ ಕಾರಣಕ್ಕೆ ಎರಡನೇ ಬಾರಿ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂನಲ್ಲೇ ಪ್ರಮಾಣ ವಚನ  ನಡೆಸಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ