ದಲಿತ ಸಿಎಂ ವಿಚಾರ: ಸಿದ್ದರಾಮಯ್ಯಗೆ ಬಿಜೆಪಿಗೆ ಸವಾಲು ಹಾಕುವ ಯೋಗ್ಯತೆ ಇಲ್ಲ | ಕೆ.ಎಸ್.ಈಶ್ವರಪ್ಪ
ಚಿತ್ರದುರ್ಗ: ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆಳ್ವಿಕೆ ಮಾಡಿರುವ ಕಾಂಗ್ರೆಸ್ ಎಷ್ಟು ದಲಿತ ಸಿಎಂ ಮಾಡಿದೆ? ಯೋಗ್ಯತೆ ಇಲ್ಲದ ಸಿದ್ದರಾಮಯ್ಯ ಬಿಜೆಪಿಗೆ ಸವಾಲು ಹಾಕುವ ನೈತಿಕತೆ ಇಲ್ಲ ಎಂದು ಕೆ.ಎಸ್.ಈಶ್ವರಪ್ಪ ಅವರು ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಿದೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಿರುವ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ದಲಿತ ಸಿಎಂ ಮಾಡಲಿ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಈಶ್ವರಪ್ಪ, ರಾಜ್ಯದಲ್ಲಿ ನಾವು(ಕಾಂಗ್ರೆಸ್) ದಲಿತರನ್ನು ಸಿಎಂ ಮಾಡದೇ ತುಳಿದಿದ್ದೇವೆ ನೀವು(ಬಿಜೆಪಿ) ಉದ್ಧಾರ ಮಾಡಿ ಎಂದು ಹೇಳಿದರೆ ಏನಿದೆ ಬೆಲೆ ಎಂದು ಅವರು ಪ್ರಶ್ನಿಸಿದ್ದಾರೆ.
ನಾನೇ ಮುಂದಿನ ಸಿಎಂ ಎಂದು ಹೇಳುವ ಸಿದ್ದರಾಮಯ್ಯಗೆ ನಳಿನ್ ಕುಮಾರ್ ಕಟೀಲ್ ಅವರನ್ನು ಪ್ರಶ್ನಿಸುವ ನೈತಿಕತೆ ಇದೆಯೇ? ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಬಂದರೂ ಅವರು ದಲಿತರನ್ನು ಸಿಎಂ ಮಾಡಲ್ಲ. ಸಿದ್ದರಾಮಯ್ಯನವರು ತಮ್ಮ ಬೆಂಬಲಿಗರ ಮೂಲಕ ಸಿದ್ದರಾಮಯ್ಯ ಸಿಎಂ ಎಂಬ ಘೋಷಣೆ ಕೂಗಿಸುತ್ತಾರೆ ಎಂದು ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದರು.
ಇನ್ನಷ್ಟು ಸುದ್ದಿಗಳು…
ಈಗ ಅವಕಾಶವಿದೆ, ದಲಿತ ಸಿಎಂ ಮಾಡಿ ತೋರಿಸಿ | ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಸವಾಲು
ಪ್ರಯಾಣಿಕರೇ ಎಚ್ಚರ! | ಭಾರೀ ಮಳೆಗೆ ಶಿರಾಡಿಘಾಟ್ ರಸ್ತೆಯಲ್ಲಿ ಭಾರೀ ಬಿರುಕು
ಚೈತ್ರಾ ಕೋಟೂರ್ ಸನ್ಯಾಸಿನಿ ಆಗಿದ್ದು ನಿಜವೇ? | ಅಸಲಿಗೆ ನಡೆದದ್ದೇನು?
ತನ್ನ ಇಬ್ಬರು ಮಾನಸಿಕ ಅಸ್ವಸ್ಥ ಹೆಣ್ಣು ಮಕ್ಕಳಿಂದಲೇ ಹತ್ಯೆಗೀಡಾದ ತಾಯಿ!
ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಿಸುವುದು ಸೂಕ್ತವಲ್ಲ | ಎನ್.ಮಹೇಶ್
ಸಿಎಂ ಯಡಿಯೂರಪ್ಪ ರಾಜೀನಾಮೆಗೆ ಮುಹೂರ್ತ ಫಿಕ್ಸ್!? | ಬಿಜೆಪಿ ಪಾಳಯದೊಳಗೆ ಕೇಳಿ ಬರುತ್ತಿರುವ ಸುದ್ದಿ ಏನ್ ಗೊತ್ತಾ?
ಬಿಗ್ ಬ್ರೇಕಿಂಗ್ ನ್ಯೂಸ್: ರಾಜೀನಾಮೆ ಬಗ್ಗೆ ಸಿಎಂ ಯಡಿಯೂರಪ್ಪರಿಂದ ಮಹತ್ವದ ಹೇಳಿಕೆ