ಸಿದ್ದರಾಮಯ್ಯನವರೇ ದೊಡ್ಡ ಭಯೋತ್ಪಾದಕ ಅನ್ನಿಸುತ್ತಿದೆ | ನಳಿನ್ ಕುಮಾರ್ ಕಟೀಲ್ ವಾಗ್ದಾಳಿ - Mahanayaka
3:19 AM Thursday 21 - November 2024

ಸಿದ್ದರಾಮಯ್ಯನವರೇ ದೊಡ್ಡ ಭಯೋತ್ಪಾದಕ ಅನ್ನಿಸುತ್ತಿದೆ | ನಳಿನ್ ಕುಮಾರ್ ಕಟೀಲ್ ವಾಗ್ದಾಳಿ

naleen kumar kateel
29/09/2021

ಮಂಗಳೂರು: ಸಿದ್ದರಾಮಯ್ಯನವರೇ ತಾಲಿಬಾನ್ ಸಂಸ್ಕೃತಿ ಹೊಂದಿದವರು, ಅವರು ದೊಡ್ಡ ಭಯೋತ್ಪಾದಕ ಅನ್ನಿಸುತ್ತಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಬಿಜೆಪಿ, ಆರೆಸ್ಸೆಸ್ ತಾಲಿಬಾನ್ ಸಂಸ್ಕೃತಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಮಂಗಳೂರಿನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಸಿದ್ದರಾಮಯ್ಯನವರೇ ತಾಲಿಬಾನ್ ಸಂಸ್ಕೃತಿ ಹೊಂದಿದವರು, ಅವರು ದೊಡ್ಡ ಭಯೋತ್ಪಾದಕ ಅನಿಸುತ್ತಿದೆ. ಅವರು ಸಿಎಂ ಆಗಿದ್ದಾಗ 24ಕ್ಕೂ ಹೆಚ್ಚು ಹಿಂದೂಗಳ ಹತ್ಯೆಯಾಗಿತ್ತು. ಕಾಂಗ್ರೆಸ್ ಆಡಳಿತದಲ್ಲಿಯೇ ರಾಜ್ಯದಲ್ಲಿ ಹೆಚ್ಚು ಕೊಲೆ, ಸುಲಿಗೆ, ಮರಣ, ನಿತ್ಯ ಗೋಹತ್ಯೆ ನಡೆಯುತ್ತಿತ್ತು ಎಂದು ತಿರುಗೇಟು  ನೀಡಿದ್ದಾರೆ.

ಕಾಂಗ್ರೆಸ್ ಅತಂತ್ರ ಸ್ಥಿತಿಯಲ್ಲಿದೆ. ಹೀಗಾಗಿ ಇಂತಹ ಹೇಳಿಕೆಗಳನ್ನು ಅವರು ನೀಡುತ್ತಿದ್ದಾರೆ. ದಕ್ಷಿಣ ಕನ್ನಡ ಒಂದೇ ಜಿಲ್ಲೆಯನ್ನು ತೆಗೆದುಕೊಂಡು ನೋಡಿದಾಗ ಶರತ್ ಮಡಿವಾಳ, ದೀಪಕ್ ರಾವ್ , ಪ್ರತಾಪ್ ಪೂಜಾರಿ ಹೀಗೆ ಹಲವು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ಸುಳ್ಯದಲ್ಲಿ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯನ್ನು ಚೂರಿಯಿಂದ ಇರಿದು ಕೊಲ್ಲಲಾಗಿದೆ. ಎಟಿಎಂ ಒಳಗೆ ಹೋದ ಮಹಿಳೆ ಮೇಲೆ ಹಲ್ಲೆಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…




ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಹೃದಯಾಘಾತವಾಗುವುದಕ್ಕೂ ಮೊದಲು ಕಂಡು ಬರುವ ಲಕ್ಷಣಗಳೇನು?

ಸಿಪಿಐನಿಂದ ಕಾಂಗ್ರೆಸ್ ಗೆ ಹೋಗುವಾಗ ಸಿಪಿಐ ಕಚೇರಿಯ ಎಸಿಯನ್ನೂ ಕೊಂಡೊಯ್ದ ಕನ್ಹಯ್ಯಾ!

ಪುಷ್ಪಾ: ರಶ್ಮಿಕಾ ಹೊಸ ಅವತಾರ ಕಂಡು ಅಭಿಮಾನಿಗಳಿಗೆ ಮತ್ತೊಮ್ಮೆ ಕ್ರಶ್ ಆಯ್ತಂತೆ!

ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ | ತಾಯಿ, ಮಗಳು ದಾರುಣ ಸಾವು

“ದೇವಸ್ಥಾನ ತೆರವಿಗೆ ಆದೇಶ ನೀಡಿದ್ದು ಜಿಲ್ಲಾಧಿಕಾರಿ, ವರ್ಗಾವಣೆಯಾಗಿದ್ದು ತಹಶೀಲ್ದಾರ್!”

ನಿಮ್ಮ ತಂದೆ ಕೂಡ ಪಂಚೆ ಉಡುವವರಾಗಿರಬಹುದು, ನಿಮ್ಮಂತಹ ಮಗನ ಬಗ್ಗೆ ಅವರೇನು ತಿಳಿಯಬಹುದು? | ಸಿ.ಟಿ.ರವಿಗೆ ಸಿದ್ದು ಗುದ್ದು

ಅತ್ಯಾಚಾರದಿಂದ ಬಾಲಕಿ ಗರ್ಭಿಣಿ: ತಂದೆಗೆ ವಿಷಯ ಹೇಳುತ್ತೇನೆ ಎಂದಿದ್ದಕ್ಕೆ ಯುವಕನಿಂದ ಘೋರ ಕೃತ್ಯ

ಕೃಷ್ಣನ ಚಕ್ರ, ಟಿಪ್ಪುವಿನ ಸಿಂಹಾಸನ ಮಾರಾಟ ಮಾಡಿದ ಆರೋಪಿ ಅರೆಸ್ಟ್!

ಇತ್ತೀಚಿನ ಸುದ್ದಿ