11:05 AM Wednesday 12 - March 2025

ಹೊಟ್ಟೆಗೆ ಏನು ತಿನ್ತಿರಿ ಬಿ.ಸಿ.ಪಾಟೇಲ್? | ತೀವ್ರ ಟ್ವೀಟ್ ದಾಳಿ ನಡೆಸಿದ ಸಿದ್ದರಾಮಯ್ಯ

04/12/2020

ಬೆಂಗಳೂರು: “ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು” ಎಂಬ ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದು,  ಹಣ-ಅಧಿಕಾರಕ್ಕಾಗಿ ಮಾರಿಕೊಂಡವರು ಹೇಡಿಗಳು ಎಂದು ತೀವ್ರ ಟ್ವೀಟ್ ದಾಳಿ ನಡೆಸಿದ್ದಾರೆ.

ಇಂದು ಸರಣಿ ಟ್ವೀಟ್ ಮಾಡಿದ ಸಿದ್ದರಾಮಯ್ಯ,  ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳಲ್ಲ ಬಿ.ಸಿ.ಪಾಟೀಲ್ ಅವರೇ, ಹಣ-ಅಧಿಕಾರಕ್ಕಾಗಿ ಆತ್ಮವನ್ನು ಮಾರಿಕೊಂಡವರು ಹೇಡಿಗಳು. ಅನ್ನ ಕೊಡುವ ರೈತರನ್ನು ನಿಂದಿಸಿ ಉಂಡಮನೆಗೆ ದ್ರೋಹ ಬಗೆಯುವ ನಿಮಗೆ ಒಂದು ಕ್ಷಣವೂ ಕೃಷಿಖಾತೆಯಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ ಎಂದು ತಿರುಗೇಟು ನೀಡಿದರು.

ಮಳೆ ಮತ್ತು ಪ್ರವಾಹದಿಂದ ಸರ್ವಸ್ವವನ್ನು ಕಳೆದುಕೊಂಡು ಬೀದಿಪಾಲಾಗಿರುವ ರೈತರಿಗೆ ಪರಿಹಾರಕೊಟ್ಟು ನೆರವಾಗುವ ಯೋಗ್ಯತೆ ನಿಮ್ಮ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಇಲ್ಲ. ಗಾಯದ ಮೇಲೆ ಬರ ಎಳೆದಂತೆ ಅದೇ ರೈತರನ್ನು ಹೇಡಿಗಳೆಂದು ಜರಿಯುತ್ತೀರಾ? ಹೊಟ್ಟೆಗೆ ಏನು ತಿನ್ತಿದ್ದೀರಾ? ಎಂದು ಸಿದ್ದರಾಮಯ್ಯ ಟ್ವೀಟ್ ದಾಳಿ ನಡೆಸಿದರು.

ವಿನಾಶಕಾರಿ ಕಾನೂನುಗಳನ್ನು ಜಾರಿಗೆ ತಂದು ರೈತರನ್ನು ಆತ್ಮಹತ್ಯೆಗೆ ದೂಡಲು ಹೊರಟಿರುವವರು ಯಾರು? ನ್ಯಾಯಕ್ಕಾಗಿ ಹೋರಾಡುತ್ತಿರುವ ಸ್ವಾಭಿಮಾನಿ ರೈತರ ಮೇಲೆ ಲಾಠಿಯೇಟು, ಅಶ್ರುವಾಯು, ಜಲಫಿರಂಗಿಗಳ ಮೂಲಕ ದೌರ್ಜನ್ಯವೆಸಗುತ್ತಿರುವ ಕೊಲೆಗಡುಕ ಮನಸ್ಸು ಯಾರದು ಬಿ.ಸಿ ಪಾಟೀಲ್? ಎಂದು ಸಿದ್ದರಾಮಯ್ಯ ಬಿ.ಸಿ.ಪಾಟೇಲ್ ಗೆ ತೀವ್ರ ತಿರುಗೇಟು ನೀಡಿದ್ದಾರೆ.

ಇತ್ತೀಚಿನ ಸುದ್ದಿ

Exit mobile version