ನಿಮ್ಮನ್ನು ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಕೂರಿಸುತ್ತೇನೆ | ಸಿದ್ದರಾಮಯ್ಯ ವಿರುದ್ಧ  ಯಡಿಯೂರಪ್ಪ ಪ್ರತಿಜ್ಞೆ - Mahanayaka

ನಿಮ್ಮನ್ನು ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಕೂರಿಸುತ್ತೇನೆ | ಸಿದ್ದರಾಮಯ್ಯ ವಿರುದ್ಧ  ಯಡಿಯೂರಪ್ಪ ಪ್ರತಿಜ್ಞೆ

05/02/2021

ಬೆಂಗಳೂರು:  ಸಿದ್ದರಾಮಯ್ಯನವರೇ ನಿಮಗೆ ಶಕ್ತಿ, ತಾಕತ್ತು ಇದ್ದರೆ ಬೆಳಗಾವಿ ಲೋಕಸಭಾ ಕ್ಷೇತ್ರ, ಬೀದರ್ ಜಿಲ್ಲೆಯ ಬಸವ ಕಲ್ಯಾಣ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರಗಳ ಉಪ ಚುನಾವಣೆ ಹಾಗೂ  ಮುಂಬರುವ ವಿಧಾನಸಭಾ ಚುನಾವಣೆಯನ್ನು ಗೆದ್ದು ಬನ್ನಿ ಎಂದು ಸಿಎಂ ಯಡಿಯೂರಪ್ಪ ಸದನದಲ್ಲಿ ಸವಾಲು ಹಾಕಿದರು.

ಬೆಳಗಾವಿ ಲೋಕಸಭಾ ಕ್ಷೇತ್ರ ಸೇರಿದಂತೆ ಮೂರೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ 150 ಸೀಟು ಗೆಲ್ಲುವ ಮೂಲಕ ನಿಮ್ಮನ್ನು ಶಾಶ್ವತಯವಾಗಿ ವಿರೋಧ ಪಕ್ಷ ಸ್ಥಾನದಲ್ಲಿಯೇ ಕುಳಿತು ಕೊಳ್ಳುವಂತೆ ಮಾಡುತ್ತೇನೆ ಎಂದು ಅವರು ಪ್ರತಿಜ್ಞೆ ಮಾಡಿದರು.

ಆಪರೇಷನ್ ಕಮಲದ ಜನಕ ಯಡಿಯೂರಪ್ಪ ಎಂದು ನೀವು ಹೇಳಿದ್ದೀರಿ. ಆದರೆ, ನೀವು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು ಆಪರೇಷನ್ ಅಲ್ಲವೇ? ಸರ್ಕಾರ ರಸ್ತೆಯಲ್ಲಿ ಕೆಟ್ಟು ನಿಂತ ಡಕೋಟ ಬಸ್ ಎಂದಿರಿ, ಟೀಕೆಗಳನ್ನು ನಾನು ಸ್ವಾಗತಿಸುತ್ತೇನೆ ಆದರೆ, ಟೀಕೆ ಹೆಸರಿನಲ್ಲಿ ಬೆಂಕಿ ಉಗುಳುವ ಬದಲು ಅಭಿವೃದ್ಧಿ ನಿಟ್ಟಿನಲ್ಲಿ ಬೆಳಕು ಚೆಲ್ಲಬೇಕು ಎಂದು ಯಡಿಯೂರಪ್ಪ ಹೇಳಿದರು

ಇತ್ತೀಚಿನ ಸುದ್ದಿ