ಸಿದ್ದರಾಮಯ್ಯನಷ್ಟು ಅಸಮರ್ಥರು ನಮ್ಮ ಗೃಹ ಸಚಿವರಲ್ಲ: ನಳಿನ್ ಕುಮಾರ್ ಕಟೀಲ್
ಹುಬ್ಬಳ್ಳಿ: ಗೃಹ ಸಚಿವ ಅರಗಜ್ಞಾನೇಂದ್ರ ಅಸಮರ್ಥ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದು, ಸಿದ್ದರಾಮಯ್ಯನಷ್ಟು ಅಸಮರ್ಥರು ನಮ್ಮ ಗೃಹ ಸಚಿವರಲ್ಲ ಎಂದು ಹೇಳಿದರು.
ದಿಡ್ಡಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ಮಾತನಾಡಿದ ಕಟೀಲ್, ದೇವಾಲಯಗಳು ಹಾಗೂ ಪೊಲೀಸರ ಮೇಲಿನ ದಾಳಿಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಗಲಭೆಗೆ ಯಾರೇ ಕಾರಣರಾಗಿದ್ದರೂ ಸಹ ನಾವು ಬಿಡೋದಿಲ್ಲ ಎಂದರು.
ಗಲಭೆಕೋರರಿಗೆ ಬಿ ರಿಪೋರ್ಟ್ ಕೊಡುವ ಕಾರ್ಯ ಅವರು ಮಾಡಿದ್ರು. ಅದರಿಂದಲೇ ಇಂತಹ ಗಲಾಟೆಗಳಾಗುತ್ತಿವೆ. ಯಾವ-ಯಾವ ಸಂಘಟನೆಗಳು ಭಾಗಿಯಾಗಿವೆ ಅನ್ನೋದರ ಬಗ್ಗೆ ತನಿಖೆ ನಡೆಯುತ್ತಿದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಹಾದಿಯಲ್ಲಿ ಈ ಗಲಭೆ ತನಿಖೆ ನಡೆಯುತ್ತಿದೆ. ಇದರಲ್ಲಿ ಯಾರೇ ಭಾಗಿಯಾದ್ರು ಅವರ ವಿರುದ್ಧ ಕ್ರಮ ಆಗುತ್ತೆ ಎಂದರು.
ಗೃಹ ಸಚಿವರನ್ನು ಅಸಮರ್ಥ ಎಂದಿರುವ ಸಿದ್ದರಾಮಯ್ಯನವರು 5 ವರ್ಷ ಅಸಮರ್ಥವಾಗಿ ಆಡಳಿತ ಮಾಡಿದ್ದಾರೆ. ಸಿದ್ದರಾಮಯ್ಯನಷ್ಟು ಅಸಮರ್ಥರು ನಮ್ಮ ಗೃಹ ಸಚಿವರಲ್ಲ. ಸಿದ್ದರಾಮಣ್ಣ ಸರ್ಕಾರದಲ್ಲಿ ಅತಿಹೆಚ್ಚು ಗಲಭೆಗಳಾಗಿವೆ. ಅವರ ಕಾಲದಲ್ಲಿ ಹೆಚ್ಚು ಹಿಂದೂ ಯುವಕರ ಹತ್ಯೆಗಳಾಗಿವೆ. ಕೆಲ ಜೈಲಿನಲ್ಲಿ ಸಹ ಹತ್ಯೆಗಳಾಗಿದ್ದವು. ಆವಾಗಲೇ ಹತ್ಯೆಗಳನ್ನ ತಡಿಯೋಕೆ ಆಗಿಲ್ಲ ಎಂದು ಅವರು ಹೇಳಿದರು.
ಪ್ರಕರಣದಲ್ಲಿ ಯಾವ-ಯಾವ ಸಂಘಟನೆಗಳು ಭಾಗಿಯಾಗಿವೆ ಅನ್ನೋದರ ಬಗ್ಗೆ ತನಿಖೆ ನಡೆಯುತ್ತಿದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಹಾದಿಯಲ್ಲಿ ಈ ಗಲಭೆ ತನಿಖೆ ನಡೆಯುತ್ತಿದೆ. ಇದರಲ್ಲಿ ಯಾರೇ ಭಾಗಿಯಾದ್ರು ಅವರ ವಿರುದ್ಧ ಕ್ರಮ ಆಗುತ್ತೆ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪಿಎಸ್ ಐ ಹಗರಣದಲ್ಲಿ ಗೃಹ ಸಚಿವರೇ ಶಾಮೀಲು: ಪ್ರಿಯಾಂಕ್ ಖರ್ಗೆ
ಜಾದೂವೇಳೆ ಆಕಸ್ಮಿಕವಾಗಿ ಬ್ಲೇಡ್ ಗಳ ಮಾಲೆ ನುಂಗಿದ ಮಾಂತ್ರಿಕ!
ಫ್ರಾನ್ಸ್ ಅಧ್ಯಕ್ಷರಾಗಿ ಪುನರಾಯ್ಕೆಯಾದ ಇಮ್ಯಾನುಯೆಲ್ ಮ್ಯಾಕ್ರೋನ್
ಕಾರಿನ ಸೈಲೆನ್ಸರ್ ನಲ್ಲಿ ಕಾಣಿಸಿಕೊಂಡ ಹೊಗೆ: ಕಾರಿನಿಂದ ಇಳಿದರೂ ಹೋಯ್ತು ಪ್ರಾಣ!
ಸಾಲಗಾರರ ಹೆಸರು ವಾಟ್ಸಾಪ್ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ