ಸಿದ್ದರಾಮೋತ್ಸವಕ್ಕೆ ಬಿಜೆಪಿ ಶಾಸಕರೂ ವಾಹನ ವ್ಯವಸ್ಥೆ ಮಾಡಿದ್ದರು!
ಬೆಳಗಾವಿ: ಸಿದ್ದರಾಮೋತ್ಸವ ಮುಗಿದು ದಿನಗಳು ಕಳೆದರೂ, ಚರ್ಚೆ ಮಾತ್ರ ನಿಂತಿಲ್ಲ. ಸಿದ್ದರಾಮೋತ್ಸವದಿಂದ ಕಾಂಗ್ರೆಸ್ ಗೆ ದೊಡ್ಡ ಬಲ ಬಂದಿದೆ. ಕಾಂಗ್ರೆಸ್ ಪರವಾಗಿ ಜನರಿದ್ದಾರೆ ಎನ್ನುವುದನ್ನು ತೋರಿಸಿದೆ ಎಂದು ಕಾಂಗ್ರೆಸ್ ನಾಯಕರು ವಾದಿಸಿದರೆ, ಇತ್ತ ಬಿಜೆಪಿ ನಾಯಕರು ಸಿದ್ದರಾಮೋತ್ಸವದಿಂದ ಕಾಂಗ್ರೆಸ್ ನೊಳಗೆ ಒಡಕು ಮೂಡಿದೆ ಎಂದು ಹೇಳಿದೆ. ಈ ನಡುವೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಿದ್ದರಾಮೋತ್ಸವ ದೀಪಾವಳಿ ಆಫರ್ ರೀತಿ ಪಕ್ಷಕ್ಕೆ ಒಂದು ಹೊಸ ಶಕ್ತಿ ಕೊಟ್ಟಿದೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ನ ಎಲ್ಲಾ ನಾಯಕರು ಒಗ್ಗಟ್ಟಾಗಿದ್ದೇವೆ. ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಬಂದವರೆಲ್ಲರೂ ಕಾಂಗ್ರೆಸ್ ಕಾರ್ಯಕರ್ತರು. ಕಾರ್ಯಕ್ರಮಕ್ಕೆ ಬಿಜೆಪಿ ಶಾಸಕರು ಕೂಡ ವಾಹನಗಳ ವ್ಯವಸ್ಥೆ ಮಾಡಿದ್ದರು ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸಿದ್ದರಾಮಯ್ಯ ಅವರನ್ನು ತಬ್ಬಿಕೊಳ್ಳುವಂತೆ ಡಿ.ಕೆ. ಶಿವಕುಮಾರ್ ಗೆ ಸೂಚಿಸಿರುವುದರಲ್ಲಿ ತಪ್ಪೇನಿಲ್ಲ. ಡಿ.ಕೆ. ಶಿವಕುಮಾರ್ ಮರೆತಿರಬಹುದು. ರಾಹುಲ್ ಗಾಂಧಿ ಹಾಗೇ ಸೂಚಿಸಿದರಲ್ಲಿ ತಪ್ಪೇನಿಲ್ಲ. ಮನಸಾರೆ ತಬ್ಬಿಕೊಂಡೇ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಕೈಜೋಡಿಸಿದ್ದಾರೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka