ರಾಜ್ಯ ಮಟ್ಟದ ಬೆಲ್ಟ್ ಕುಸ್ತಿಯಲ್ಲಿ ರಕ್ಷಾಗೆ ಬೆಳ್ಳಿ ಪದಕ
23/10/2024
ಕಾರ್ಕಳ : ಚಿಕ್ಕಬಳ್ಳಾಪುರದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಅ. 17ರಂದು ನಡೆದ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟದಲ್ಲಿ ಎಸ್ ವಿಟಿ ವನಿತಾ ಪದವಿ ಪೂರ್ವ ಕಾಲೇಜಿನ, ರಕ್ಷಾ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಬೆಳ್ಳಿ ಪದಕ ಗೆದ್ದಿದ್ದಾರೆ.
ಗ್ರಾಮೀಣ ಪ್ರತಿಭೆಯಾಗಿರುವ ರಕ್ಷಾ, ಎಸ್ ವಿಟಿ ವನಿತಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಾಮರ್ಸ್ ವಿದ್ಯಾರ್ಥಿನಿಯಾಗಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಪ್ರಭಾವತಿ, ತರಬೇತುದಾರ ಅಕ್ಷತ್ ತರಬೇತಿಯನ್ನು ನೀಡಿರುತ್ತಾರೆ.
ಇವರು ರೆಂಜಾಳ ಗೋಳಿದಡಿ ರವಿ ಮತ್ತು ಉಷಾ ದಂಪತಿಯ ಪುತ್ರಿಯಾಗಿದ್ದಾರೆ. ಇವರ ಸಾಧನೆಗೆ ಕಾಲೇಜಿನ ಶಿಕ್ಷಕರು, ಸಿಬ್ಬಂದಿ ವರ್ಗ ಅಭಿನಂದನೆ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296