ಅಲೋಪತಿ ಪದ್ಧತಿಯ ಅವಹೇಳನ: ಅಂದು ಸಿಂಹದಂತೆ ಗುಡುಗಿದ್ದ ಬಾಬಾ ರಾಮ್ ದೇವ್ ಈಗ ಮಾಡಿದ್ದೇನು?

baba ramdev
23/06/2021

ನವದೆಹಲಿ: ಅಲೋಪತಿ ವೈದ್ಯಕೀಯ ಪದ್ಧತಿಯ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಯೋಗ ಗುರು ಬಾಬಾ ರಾಮ್ ದೇವ್, ಇದೀಗ ತನ್ನ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಬೆನ್ನಲ್ಲೇ  ಪ್ರಕರಣದ ವಿಚಾರಣೆ ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಕೊವಿಡ್ 19 ಚಿಕಿತ್ಸೆಯಲ್ಲಿ ಆಲೋಪತಿ ಪರಿಣಾಮಕಾರಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಬಾಬಾ ರಾಮ್ ದೇವ್ ವಿರುದ್ಧ ನಾನಾ ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ.  ಈ ಪ್ರಕರಣಗಳ ವಿಚಾರಣೆಗೆ ತಡೆ ನೀಡಬೇಕು ಎಂದು ಅವರು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾರೆ.

ಇನ್ನೂ ಭಾರತೀಯ ವೈದ್ಯಕೀಯ ಸಂಘ ಪಾಟ್ನಾ ಮತ್ತು ರಾಯ್ ಪುರ ಶಾಖೆಗಳು ದಾಖಲಿಸಿರುವ ಪ್ರಕರಣವನ್ನು ದೆಹಲಿಗೆ ವರ್ಗಾಯಿಸಬೇಕು ಎಂದು ಮನವಿ ಮಾಡಿದ್ದಾರೆ. ತನ್ನ ವಿರುದ್ಧ ಈ ಪ್ರಕರಣದ ವಿಚಾರಣೆ ನಡೆಸಬಾರದು ಎಂದು ಯೋಗಗುರು ಮನವಿ ಮಾಡಿದ್ದಾರೆ.

ತಮ್ಮ ಹೇಳಿಕೆಯ ಸಂದರ್ಭದಲ್ಲಿ ನನ್ನ ವಿರುದ್ಧ ಕ್ರಮಕೈಗೊಳ್ಳುವವರು ಈ ಸರ್ಕಾರದಲ್ಲಿ ಯಾರೂ ಇಲ್ಲ ಎಂದು ದರ್ಪದ ಹೇಳಿಕೆಗಳನ್ನು ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.  ಇದೀಗ ವಿಚಾರಣೆ ಸಮೀಪಿಸುತ್ತಿದ್ದಂತೆಯೇ, ತನ್ನ ವಿರುದ್ಧ ಯಾವುದೇ ಪ್ರಕರಣ ದಾಖಲಿಸಬಾರದು ಎಂದು ಬಾಬಾ ರಾಮ್ ದೇವ್ ಕೋರ್ಟ್ ಮೊರೆ ಹೋಗಿದ್ದಾರೆ.

ಇತ್ತೀಚಿನ ಸುದ್ದಿ

Exit mobile version