ಸಿನಿಮಾ ಮಂದಿರದ ಹೊರಗಡೆ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ನಡೆಸಿದ ಶಿವರಾಜ್ ಕುಮಾರ್ - Mahanayaka
10:10 AM Thursday 12 - December 2024

ಸಿನಿಮಾ ಮಂದಿರದ ಹೊರಗಡೆ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ನಡೆಸಿದ ಶಿವರಾಜ್ ಕುಮಾರ್

shivaraj kumar
14/11/2021

ಬೆಂಗಳೂರು: ಪುನೀತ್ ರಾಜ್ ಕುಮಾರ್ ನಿಧನದ ಬಳಿಕ ಇಂದು ನೋವಿನ ನಡುವೆಯೇ ನಟ ಶಿವರಾಜ್ ಕುಮಾರ್ ಅವರು ತಮ್ಮ ಭಜರಂಗಿ—2 ಚಿತ್ರವನ್ನು ವೀಕ್ಷಿಸಿದರು. ಇದೇ ವೇಳೆ ಅಭಿಮಾನಿಗಳಿಗೆ ಅನ್ನ ಸಂತರ್ಪಣೆಯನ್ನೂ ನಡೆಸಿದರು.

ಚಿತ್ರಮಂದಿರದ ಹೊರಗೆ ಅನ್ನ ಸಂತರ್ಪಣೆ ವ್ಯವಸ್ಥೆಯನ್ನು ಮಾಡಿದ್ದ ಶಿವರಾಜ್ ಕುಮಾರ್ ಅವರು ಸ್ವತಃ ತಾವೇ ಮುಂದೆ ನಿಂತು ಅಭಿಮಾನಿಗಳಿಗೆ ಬಡಿಸಿದರು. ಸಿನಿಮಾ ಬಿಡುಗಡೆಯಾದ ದಿನವೇ ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿದ್ದರು. ಹಾಗಾಗಿ ಶಿವರಾಜ್ ಕುಮಾರ್ ಅವರು ಭಜರಂಗಿ –2 ಸಿನಿಮಾ ನೋಡಿರಲಿಲ್ಲ. ಚಿತ್ರ ಬಿಡುಗಡೆಯಾದ ಸಂದರ್ಭದಲ್ಲಿ ನಾಯಕ ನಟ ಆ ಚಿತ್ರವನ್ನೂ ನೋಡಬೇಕಾಗಿರುವುದು ಒಂದು ಸಂಪ್ರದಾಯದಂತೆ ನಡೆದು ಬಂದಿದೆ. ಹೀಗಾಗಿ ನಟ ಶಿವರಾಜ್ ಕುಮಾರ್ ಅವರು ಚಿತ್ರಮಂದಿರಕ್ಕೆ ಹೋಗಿ ಇಂದು ಅಭಿಮಾನಿಗಳ ಜೊತೆಗೆ ಚಿತ್ರ ವೀಕ್ಷಿಸಿದ್ದಾರೆ.

ಇನ್ನೂ ಈ ನೋವಿನಲ್ಲಿಯೂ ಅಭಿಮಾನಿಗಳು  ಭಜರಂಗಿ –2 ಚಿತ್ರವನ್ನು ನೋಡುತ್ತಿದ್ದಾರೆ. ನಮ್ಮ ಕಷ್ಟದಲ್ಲಿ ಅಭಿಮಾನಿಗಳು ಜೊತೆಯಾಗಿದ್ದಾರೆ. ಈ ಕಷ್ಟದ ಸಮಯದಲ್ಲಿ ಚಿತ್ರ ನೋಡಿ ಅಭಿಮಾನಿಗಳು ನಮ್ಮ ಜೊತೆಗೆ ನಿಂತಿದ್ದಾರೆ. ನಮಗೆ ನೀಡಿರುವ ಈ ಬೆಂಬಲಕ್ಕೆ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಇದೇ ಸಂದರ್ಭದಲ್ಲಿ ಶಿವರಾಜ್ ಕುಮಾರ್ ಅವರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ರಾಜ್ಯದ ಬಿಟ್ ಕಾಯಿನ್ ಹಗರಣ ವಿಚಾರಕ್ಕೆ ಎಂಟ್ರಿಯಾದ ರಾಹುಲ್ ಗಾಂಧಿ!

ಮಕ್ಕಳಿಗೆ ಸಿಹಿ ಹಂಚುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯನ್ನು ಎಳೆದೊಯ್ದು ಕತ್ತುಕೊಯ್ದ | ಬೆಚ್ಚಿ ಬಿದ್ದ ಜನತೆ

ದೆಹಲಿಯಲ್ಲಿ ಒಂದು ದಿನ ಉಸಿರಾಡೋದು 20 ಸಿಗರೇಟ್ ಸೇದಿದ್ದಕ್ಕೆ ಸಮಾನ! | ದೆಹಲಿಯಲ್ಲೀಗ ಆಕ್ಸಿಜನ್ ಇಲ್ಲದೇ ಪರದಾಡುವ ಸ್ಥಿತಿ!

ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರ ದಾರುಣ ಸಾವು!

ರಚಿತಾ ರಾಮ್  “ಫಸ್ಟ್ ನೈಟ್” ಹೇಳಿಕೆಗೆ ಆಕ್ಷೇಪ: ಕ್ಷಮೆಯಾಚನೆಗೆ ಒತ್ತಾಯ

ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರಿಗೆ ಮಾತೃ ವಿಯೋಗ

ಪುನೀತ್ ಎಲ್ಲ ಚಿತ್ರಗಳಲ್ಲಿಯೂ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದ್ದಾರೆ | ರಮೇಶ್ ಜಾರಕಿಹೊಳಿ ಭಾವುಕ

4 ಕೋಟಿಯ ಚಿನ್ನಾಭರಣ ಕಳವು: ಮಗಳ ವಿರುದ್ಧವೇ ದೂರು ನೀಡಿದ ತಾಯಿ!

ಇತ್ತೀಚಿನ ಸುದ್ದಿ