ಡ್ರಗ್ಸ್ ಖರೀದಿಗೆ ಹಣ ನೀಡಲಿಲ್ಲ ಎಂದು ತಂದೆಯನ್ನೆ ಕೊಂದ ಪಾಪಿ! - Mahanayaka
9:18 AM Saturday 21 - December 2024

ಡ್ರಗ್ಸ್ ಖರೀದಿಗೆ ಹಣ ನೀಡಲಿಲ್ಲ ಎಂದು ತಂದೆಯನ್ನೆ ಕೊಂದ ಪಾಪಿ!

drage
02/02/2023

ನವದೆಹಲಿ: ಡ್ರಗ್ಸ್ ಖರೀದಿಗೆ ಹಣ ಕೊಡಲಿಲ್ಲ ಎಂದು ಜನ್ಮ ನೀಡಿ ತಂದೆಯನ್ನೇ ಮಗ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ವಾಯುವ್ಯ ದೆಹಲಿಯ ಸುಭಾಷ್ ಪ್ಲೇಸ್‌ನಲ್ಲಿ ನಡೆಸಿದೆ.

ಶಕುರ್ ಪುರ ಗ್ರಾಮದ ನಿವಾಸಿ ಸುರೇಶ್ ಎಂಬವರು ತಮ್ಮ ಪುತ್ರನಿಂದಲೇ ಹತ್ಯೆಯಾಗಿರುವವರಾಗಿದ್ದಾರೆ. ಗಲಾಟೆ ನಡೆದಿರುವ ಮಾಹಿತಿಯನ್ವಯ ಪೊಲೀಸರು ಘಟನಾಸ್ಥಳಕ್ಕೆ ಆಗಮಿಸಿದ ವೇಳೆ ಸುರೇಶ್ ಅವರು ಗಂಭೀರವಾಗಿ ಗಾಯಗೊಂಡು ನರಳುತ್ತಿದ್ದರು. ಅವರ ಕಿವಿಯಿಂದ ರಕ್ತಸ್ರಾವವಾಗುತ್ತಿತ್ತು.

ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿ ವ್ಯಕ್ತಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಿದಾಗ ಪುತ್ರ ಅಜಯ್ ಎಂಬಾತನೇ ವ್ಯಕ್ತಿಯನ್ನು ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.

ಡ್ರಗ್ಸ್ ಖರೀದಿಗೆ ಹಣ ನೀಡುವಂತೆ ಪುತ್ರ ತಂದೆಯ ಜೊತೆಗೆ ಜಗಳವಾಡಿದ್ದಾನೆ. ಮಾತಿಗೆ ಮಾತು ಬೆಳೆದು ತಂದೆಯ ವಿರುದ್ಧ ಸಿಟ್ಟಿಗೆದ್ದ ಯುವಕ ತಂದೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ