ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಗುಂಡಿಕ್ಕಿ ಹತ್ಯೆ ಮಾಡಿ, ಆ್ಯಸಿಡ್ ಎರಚಿದ ಪಾಪಿಗಳು

ರಾಜಸ್ಥಾನ: ದಲಿತ ಬಾಲಕಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಗುಂಡಿಕ್ಕಿ ಹತ್ಯೆ ಮಾಡಿ, ಮೃತದೇಹದ ಗುರುತು ಮರೆಮಾಚಲು ಮೃತದೇಹದ ಮುಖಕ್ಕೆ ಆ್ಯಸಿಡ್ ಎರಚಿ ಬಾವಿಗೆಸೆದ ಅಮಾನವೀಯ ಘಟನೆ ರಾಜಸ್ಥಾನದ ಕರೌಲಿಯಲ್ಲಿ ನಡೆದಿದೆ.
ಇಲ್ಲಿನ ನಡೌಟಿ ಉಪ ವಿಭಾಗದ ತೋಡಭೀಮ್ ನ ಮೋಹನಪುರದಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಮೃತದೇಹವನ್ನು ಬಾವಿಯಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಸಂತ್ರಸ್ತ ಬಾಲಕಿಯು ತೊಡಭೀಮ್ ಪ್ರದೇಶದ ಮೋಹನಪುರ ನಿವಾಸಿಯಾಗಿದ್ದಾಳೆ. ಬುಧವಾರ ಆಕೆ ನಾಪತ್ತೆಯಾಗಿದ್ದಳು. ಗುರುವಾರ ಆಕೆಯ ಮೃತದೇಹ ಬಾವಿಯಲ್ಲಿ ಪತ್ತೆಯಾಗಿತ್ತು. ಮೃತದೇಹ ಹೊರ ತೆಗೆದಾಗ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಗುಂಡು ಹಾರಿಸಿ ಹತ್ಯೆ ಮಾಡಿ, ಗುರುತು ಮರೆಮಾಚುವ ಉದ್ದೇಶದಿಂದ ಮೃತದೇಹದ ಮುಖಕ್ಕೆ ಆ್ಯಸಿಡ್ ಎರಚಿರುವುದು ಬೆಳಕಿಗೆ ಬಂದಿದೆ.
ಘಟನೆ ವಿರುದ್ಧ ಗ್ರಾಮಸ್ಥರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಬಿಜೆಪಿ ಕಾರ್ಯಕರ್ತರು ಹಾಗೂ ಸಂಸದ ಕಿರೋಡಿ ಲಾಲ್ ಮೀನಾ ಅವರು ಕೂಡ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw