ಮಧ್ಯಪ್ರದೇಶದಲ್ಲಿ ನಡೀತು ಪೈಶಾಚಿಕ ಕೃತ್ಯ: ಬಿಜೆಪಿ ಮುಖಂಡನ ಪುತ್ರ ಸೇರಿ ನಾಲ್ವರು ಅರೆಸ್ಟ್
ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಮಧ್ಯಪ್ರದೇಶದ ದಾತಿಯ ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನ ಪುತ್ರ ಸೇರಿ ನಾಲ್ವರನ್ನು ಬಂಧಿಸಲಾಗಿದೆ.
19 ವರ್ಷದ ಯುವತಿಯನ್ನು ಅಪಹರಿಸಿದ ನಾಲ್ವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇದರಿಂದ ನೊಂದ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿರುವ ಪೊಲೀಸರು ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳನ್ನು ಹುಡುಕಿ ಕೊಟ್ಟವರಿಗೆ 10,000 ರೂಪಾಯಿ ಬಹುಮಾನ ಘೋಷಿಸಲಾಗಿದೆ.
ಇಲ್ಲಿಯವರೆಗೆ ಬಂಧಿಸಿರುವವರಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತನ ಅಪ್ರಾಪ್ತ ಮಗನೂ ಸೇರಿದ್ದು ಎಫ್ ಅರ್ ಐ ನಲ್ಲಿ ಮಾಹಿತಿ ದಾಖಲಾಗಿದೆ.
ಈ ಘಟನೆ ದುರದೃಷ್ಟಕರ. ಬಿಜೆಪಿ ಕಾರ್ಯಕರ್ತನ ಮಗ ಈ ಆರೋಪದಲ್ಲಿ ಭಾಗಿಯಾಗಿದ್ದರೆ ಪಕ್ಷವು ಅವರಿಗೆ ನೋಟೀಸ್ ನೀಡಿ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುರೇಂದ್ರ ಬುಧೋಲಿಯಾ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw