ಮೂಡುಬಿದಿರೆ: ಎಸ್ ಕೆಎಫ್ ಕಾರ್ಖಾನೆಯಿಂದ ತೊಂದರೆ: ಗ್ರಾಮಸ್ಥರಿಂದ ಅಹೋರಾತ್ರಿ ಪ್ರತಿಭಟನೆ
ಮಂಗಳೂರು: ಮೂಡುಬಿದಿರೆ ಸಮೀಪದ ಬನ್ನಡ್ಕ ಎಂಬಲ್ಲಿನ ಎಸ್ ಕೆಎಫ್ ಕಾರ್ಖಾನೆಯಿಂದ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಪಡುಮಾರ್ನಾಡು ಗ್ರಾಮ ಪಂಚಾಯತ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಎಸ್ ಕೆಎಫ್ ಕಾರ್ಖಾನೆಯಿಂದ ಕಳೆದ ಮೂರು ವರ್ಷದಿಂದ ತೀವ್ರ ತೊಂದರೆಯಾಗುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ಅಧಿಕಾರಿಗಳು ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಪಡುಮಾರ್ನಾಡು ಬನ್ನಡ್ಕ ಗ್ರಾಮಸ್ಥರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.
ಕಾರ್ಖಾನೆಯಿಂದ ಆಗುವ ಶಬ್ದ ಹಾಗೂ ವಾಯುಮಾಲಿನ್ಯದಿಂದ ಗ್ರಾಮದ ಮಕ್ಕಳು ಅನಾರೋಗ್ಯಕ್ಕೊಳಗಾಗುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೂ ನೂರಾರು ಬಾರಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿರುವ ಗ್ರಾಮಸ್ಥರು ಪಡುಮಾರ್ನಾಡು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಉತ್ತರಾಖಂಡ್: ಸಚಿವ ಹರಕ್ ಸಿಂಗ್, ಶಾಸಕರೊಬ್ಬರ ದಿಢೀರ್ ರಾಜೀನಾಮೆ
ಒಂದೇ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ
ಸ್ನೇಹಿತನಿಂದಲೇ ಯುವಕನ ಕೊಲೆ: ಆರೋಪಿಯ ಬಂಧನ
ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ: ಮೂವರ ಬಂಧನ
ಚಾರ್ಮಾಡಿ ಘಾಟ್: ಬಸ್ಸಿನಲ್ಲಿಯೇ ಕಂಡೆಕ್ಟರ್ ಗೆ ಹೃದಯಾಘಾತ
ತಮಿಳು ಖ್ಯಾತ ಹಾಸ್ಯ ನಟ ವಡಿವೇಲುಗೆ ಅನಾರೋಗ್ಯ: ಶೀಘ್ರ ಚೇತರಿಕೆಗೆ ಅಭಿಮಾನಿಗಳಿಂದ ಪ್ರಾರ್ಥನೆ