ಸರ್ಕಾರವನ್ನು ಅಸ್ಥಿರಗೊಳಿಸಲು ಅಪಪ್ರಚಾರದ ತಂತ್ರ: ಬಿಜೆಪಿ ವಿರುದ್ಧ ರಮಾನಾಥ ರೈ ಗುಡುಗು

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿರುವ ಹಂತದಲ್ಲಿ ಬಿಜೆಪಿ ಮುಖಂಡರು ಸರ್ಕಾರವನ್ನು ಅಸ್ಥಿರ ಗೊಳಿಸಲು ಅಪಪ್ರಚಾರದ ತಂತ್ರದಲ್ಲಿ ತೊಡಗಿದ್ದಾರೆ. ಬಿಜೆಪಿ ಜನರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಪ್ರಯತ್ನದಲ್ಲಿ ತೊಡಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದರು.
ಅವರು ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಈ ಹಿಂದೆ ಜಿಲ್ಲೆಯಲ್ಲಿ ನಡೆದಿರುವ ಧರ್ಮ, ಮತೀಯ ದ್ವೇಷದ ಹತ್ಯೆಯ ಪ್ರಕರಣದಲ್ಲಿ ಯಾವುದೇ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿಲ್ಲ ಎನ್ನುವುದು ತನಿಖೆ ಬಹಿರಂಗ ಪಡಿಸಿದೆ. ಬದಲಾಗಿ ಬಿಜೆಪಿ ಪಕ್ಷದ ಬೆಂಬಲಿತ ಮತೀಯ ಸಂಘಟನೆ ಗಳ ಸದಸ್ಯರು ಗುರುತಿಸಿಕೊಂಡಿರುವುದು ಬಹಿರಂಗವಾಗಿದೆ. ಹೀಗಿರುವಾಗ ಬಿಜೆಪಿ ರಾಜಾಧ್ಯಕ್ಷರು ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಪಕ್ಷ ಮತ್ತು ಮುಖಂಡರ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸಾಮರಸ್ಯ ಬಯಸುವ ಪಕ್ಷ. ಯಾವುದೇ ಸಂದರ್ಭದಲ್ಲಿ ಹಿಂಸೆಗೆ ಪ್ರಚೋದನೆ ನೀಡಿಲ್ಲ. ಯಾರು ಪ್ರಚೋದನಕಾರಿ ಭಾಷಣ ಮಾಡಿರುವುದು ?ಯಾವ ಪಕ್ಷ ಧರ್ಮ, ಕೋಮು ದ್ವೇಷದ ರಾಜಕೀಯ ಮಾಡುತ್ತಿದ್ದಾರೆ ಎನ್ನುವುದು ಜಿಲ್ಲೆಯ ಜನತೆಗೆ ತಿಳಿದಿದೆ. ಕಾಂಗ್ರೆಸ್ ಈ ರೀತಿಯ ರಾಜಕೀಯ ಮಾಡಿಲ್ಲ. ಜಿಲ್ಲೆಯ ಜನರಿಗೆ ಅತ್ಯಂತ ಹೆಚ್ಚು ಸರಕಾರಿ ಸೌಲಭ್ಯಗಳನ್ನು ನೀಡಿದೆ. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಜನರೇ ಮುಂದಿದ್ದಾರೆ. ಬಿಜೆಪಿಯ ಈ ರೀತಿಯ ಅಪಪ್ರಚಾರವನ್ನು ಇನ್ನಾದರೂ ನಿಲ್ಲಿಸಲು ಮನವಿ ಮಾಡುವುದಾಗಿ ಹಾಗೂ ಇಂತಹ ತಂತ್ರಗಾರಿಕೆಯ ವಿರುದ್ಧ ಜನ ಜಾಗೃತರಾಗಬೇಕು ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw