ಸಿ.ಟಿ.ರವಿ ಬಂಧನ ವಿರುದ್ಧ ಬೆಂಬಲಿಗರಿಂದ ಪ್ರತಿಭಟನೆ: ಸರ್ಕಾರ, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಘೋಷಣೆ
ಚಿಕ್ಕಮಗಳೂರು: ಸಿ.ಟಿ.ರವಿ ಬಂಧನ ವಿರೋಧಿಸಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಿ.ಟಿ.ರವಿ ಮನೆಯಿಂದ ಪ್ರತಿಭಟನಾಕಾರರು ಮೆರವಣಿಗೆ ನಡೆಸಿದರು. ಈ ವೇಳೆ ಪೊಲೀಸರು ಅವರನ್ನು ತಡೆದರು. ಈ ಸಂದರ್ಭದಲ್ಲಿ ಸಿ.ಟಿ.ರವಿ ಬೆಂಬಲಿಗರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು.
ನಾವು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತೇವೆ, ಪ್ರತಿಭಟನೆ ಮಾಡಲು ಅವಕಾಶ ಕೊಡಿ ಎಂದು ಬೆಂಬಲಿಗರು ಆಗ್ರಹಿಸಿದರು. ನೀವು ಸರ್ಕಾರ ಹೇಳಿದ ಹಾಗೆ ಕೇಳುತ್ತೀರಿ, ನಾವು ಶಾಂತಿ ಮೀರಿದರೆ ಬಂಧಿಸಿ, ಅದನ್ನು ಹೊರತುಪಡಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಾವು ಪ್ರತಿಭಟಿಸುತ್ತೇವೆ ಎಂದು ಪೊಲೀಸರಿಗೆ ಮನವಿ ಮಾಡಿಕೊಂಡರು.
ಪ್ರತಿಭಟನೆ ವೇಳೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಬೆಂಬಲಿಗರು, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಘೋಷಣೆ ಕೂಗಿದರು. “ಕಳ್ಳಿ ಕಳ್ಳಿ ಕುಕ್ಕರ್ ಕಳ್ಳಿ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ದಿಕ್ಕಾರ ಕೂಗಿದರು.
ನಗರದ ಬಸವನಹಳ್ಳಿಯಿಂದ ನೂರಾರು ಪ್ರತಿಭಟನಾಕಾರರು ಹೊರಟರು. ಪೊಲೀಸರ ಸರ್ಪಗಾವಲಿನಲ್ಲಿ ಪ್ರತಿಭಟನಾಕಾರರ ನಡಿಗೆ ಆರಂಭಗೊಂಡಿದೆ. ಸಿ.ಟಿ.ರವಿ ಬೆಂಬಲಿಗರು ಕೈ ಮುಗಿದು ಅಂಗಡಿ ಮುಂಗಟ್ಟುಗಳನ್ನ ಮುಚ್ಚುವಂತೆ ಮನವಿ ಮಾಡಿದರು.
ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸುವ ಸಾಧ್ಯತೆ ಹಿನ್ನೆಲೆ ಕೈ ಮುಗಿದು ಪ್ರತಿಭಟನಾಕಾರರು ಮನವಿ ಮಾಡುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: