ಭಾರೀ ಗಾತ್ರದ ಕಾಳಿಂಗ ಸರ್ಪವನ್ನು ಸೆರೆ ಹಿಡಿದ ಸ್ನೇಕ್ ಆರೀಫ್
ಕೊಟ್ಟಿಗೆಹಾರ: ತರುವೆ ಗ್ರಾಮದ ಮನೆಯೊಂದರ ಬಳಿ ಅಡಗಿದ್ದ ಕಾಳಿಂಗಸರ್ಪವನ್ನು ಉರಗ ಪ್ರೇಮಿ ಸ್ನೇಕ್ ಆರೀಪ್ ಹಿಡಿದು ಸುರಕ್ಷಿತವಾಗಿ ಚಾರ್ಮಾಡಿ ಘಾಟ್ ಅರಣ್ಯಕ್ಕೆ ಬಿಟ್ಟಿದ್ದಾರೆ.
ತರುವೆ ಗ್ರಾಮದ ರಾಮಚಂದ್ರ ಅವರ ಮನೆಯ ಬಳಿ ಬುಧವಾರ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದ್ದು ಕೂಡಲೇ ಬಣಕಲ್ ನ ಉರಗ ಪ್ರೇಮಿ ಸ್ನೇಕ್ ಆರೀಪ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಆರೀಪ್ ಅವರು ಕಾಳಿಂಗ ಸರ್ಪವನ್ನು ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ.
ಭಾರೀ ಗಾತ್ರದ ಕಾಳಿಂಗ ಸರ್ಪವನ್ನು ಕಂಡು ಜನ ಬೆಚ್ಚಿಬಿದ್ದಿದ್ದರು. ಹಾವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಆರೀಪ್ ಸಾಹಸ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw