ಸೋದರಳಿಯನ ಪತ್ನಿಗೆ ಹಲ್ಲೆ, ವಿಷ ಕುಡಿಸಲು ಯತ್ನ: ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಗಂಭೀರ ಆರೋಪ - Mahanayaka

ಸೋದರಳಿಯನ ಪತ್ನಿಗೆ ಹಲ್ಲೆ, ವಿಷ ಕುಡಿಸಲು ಯತ್ನ: ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಗಂಭೀರ ಆರೋಪ

raju talikote
14/09/2021

ವಿಜಯಪುರ: ಸ್ಯಾಂಡಲ್ ವುಡ್ ನ ಖ್ಯಾಸ ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು,  ಅಕ್ಕನ ಪುತ್ರನ ಪತ್ನಿಯ ಮೇಲೆ ಹಲ್ಲೆ ನಡೆಸಿ ಬಲವಂತವಾಗಿ ವಿಷ ಕುಡಿಸಲು ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಕೌಟುಂಬಿಕ ಕಲಹದ ವಿಚಾರವಾಗಿ ಸೋದರಳಿಯನ ಪತ್ನಿಯ ಮೇಲೆ ರಾಜುತಾಲಿಕೋಟೆ ಹಾಗೂ ಪತ್ನಿ ಪ್ರೇಮಾ ಸೇರಿದಂತೆ ಇನ್ನಿತರರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸೋದರಳಿಯ ಫಯಾಜ್ ಅವರ ಪತ್ನಿ ಸನಾ ಕರಜಗಿ ಮೇಲೆ ಅಲ್ಲೆ ನಡೆಸಿ, ಬಲವಂತವಾಗಿ ವಿಷ ಕುಡಿಸಲು ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಸನಾ ಕರಜಗಿ ಅವರನ್ನು ವಿಜಯಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಹಿನ್ನೆಲೆಯಲ್ಲಿ ಸನಾ ತಾಯಿ ಫಾತಿಮಾ ವಿಜಯಪುರ ಮಹಿಳಾ ಠಾಣೆಗೆ ದೂರು ನೀಡಿದ್ದು, ನಟ ರಾಜು ತಾಳಿಕೋಟೆ, ಪತ್ನಿ ಪ್ರೇಮಾ, ಫಯಾಜ್ ಕರಜಗಿ, ಸನಾ ಭಾವ ಪಿಂಟು ಸೇರಿದಂತೆ 6 ಮಂದಿಯ ವಿರುದ್ಧ ದೂರು ದಾಖಲಾಗಿದೆ ಎಂದು ವರದಿಯಾಗಿದೆ.

ಮಹಾನಾಯಕ ಡಾಟ್ ಇನ್ ನ ಸುದ್ದಿಗಳನ್ನು ಪಡೆಯಲು 8088059494 ನಂಬರ್ ನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಸೇರಿಸಿ.

rpi

ಇನ್ನಷ್ಟು ಸುದ್ದಿಗಳು…

 

ಎನ್ ಇಪಿ ವಿರೋಧಿಸಿ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಕ್ಯಾಂಪಸ್ ಫ್ರಂಟ್ ಯತ್ನ | ಪೊಲೀಸರಿಂದ ಲಾಠಿ ಚಾರ್ಜ್

ತಂದೆಯನ್ನು ಕೊಂದು, ಕುಡಿದು ಬಿದ್ದು ಸತ್ತ ಎಂದು ನಂಬಿಸಿದ ಪುತ್ರ | ಪುತ್ರನ ಹೈಡ್ರಾಮ ಬಯಲಾಗಿದ್ದು ಹೇಗೆ ಗೊತ್ತಾ?

ಶಾಕಿಂಗ್ ನ್ಯೂಸ್: ನಡೆದುಕೊಂಡು ಹೋಗುತ್ತಿದ್ದ ಯುವತಿಯ ಖಾಸಗಿ ಅಂಗ ಮುಟ್ಟಿ ಹಾಡಹಗಲೇ ಲೈಂಗಿಕ ಕಿರುಕುಳ!

ಹೃದಯ ವಿದ್ರಾವಕ ಘಟನೆ: ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಕ್ಕಳ ಮೇಲೆಯೇ ಉರುಳಿ ಬಿತ್ತು ಕಟ್ಟಡ!

ಪ್ರಾಣ ಸ್ನೇಹಿತರು ಜೊತೆಯಾಗಿ ಪ್ರಾಣ ಬಿಟ್ಟರು: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದು ಪ್ರಾಣಕ್ಕೆ ಕುತ್ತು ತಂದಿತು!

ಜಾತಿ ಜನಗಣತಿ ಸಮೀಕ್ಷೆಯನ್ನು ಕೊಂದದ್ದು ಸಿದ್ದರಾಮಯ್ಯ, ಹೂತದ್ದು ಡಿ.ಕೆ.ಶಿವಕುಮಾರ್ | ಕೆ.ಎಸ್.ಈಶ್ವರಪ್ಪ

ಇತ್ತೀಚಿನ ಸುದ್ದಿ