” ಸೊಗಡು ವೆಂಕಟೇಶ್ ವಿ”ಈಗ ಭಾರತೀಯ ಆಹಾರ ನಿಗಮದ FCI ಸಮಿತಿ ಸದಸ್ಯರು
ಬೆಂಗಳೂರು: ಭಾರತ ಸರ್ಕಾರ ಗ್ರಾಹಕರ ವ್ಯವಹಾರಗಳ ಸಚಿವಾಲಯ, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು FCI ” ಸೊಗಡು ವೆಂಕಟೇಶ್ ವಿ” ಇವರನ್ನು ಕರ್ನಾಟಕ ರಾಜ್ಯಕ್ಕಾಗಿ ಆಹಾರ ಭಾರತೀಯ ಆಹಾರ ನಿಗಮ ಸಮಿತಿಯ ನಾಮನಿರ್ದೇಶಿತ ಸದಸ್ಯರನ್ನಾಗಿಗಿ ಆದೇಶಿಸಿದೆ.
ಸೊಗಡು ವೆಂಕಟೇಶ್ ವಿ. ತುಮಕೂರು ಜಿಲ್ಲೆ ಪಾವಗಡ ವಾಸಿಯಾಗಿದ್ದು, ಪಾವಗಡ ತಾಲೂಕು ಪಂಚಾಯಿತಿ ಅಧ್ಯಕ್ಷರು, ಜಿಲ್ಲಾ ಪಂಚಾಯಿತಿ ಯೋಜನಾ ಸಮಿತಿ ಸದಸ್ಯರು ಹಾಗೂ ಕರ್ನಾಟಕ ಮೀಡಿಯಾ ಅಕಾಡೆಮಿ ಸದಸ್ಯರಾಗಿಸಹ ಸೇವೆ ಸಲ್ಲಿಸಿದ್ದಾರೆ.
ಇವರ ಸಾಮಾಜಿಕ ಸೇವೆ ಜನಬದ್ಧತಾ ಕಾಳಜಿಯನ್ನು ಗುರುತಿಸಿದ ಕೇಂದ್ರ ಸರ್ಕಾರವು ಮುಂದಿನ ಎರಡು ವರ್ಷಗಳ ಅವಧಿಗೆ ತಕ್ಷಣವೇ ಜಾರಿಗೆ ಬರುವಂತೆ ನಾಮನಿರ್ದೇಶನಗೊಳಿಸಿ ಆದೇಶ ಹೊರಡಿಸಿದೆ. ಭಾರತ ಸರ್ಕಾರದ ಅಧೀನ ಕಾರ್ಯದರ್ಶಿಅಜಯ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಇವರು ಇಂದು ಬೆಂಗಳೂರಿನಲ್ಲಿನ ಪ್ರಾಂತೀಯ ಕಛೇರಿಯಲ್ಲಿ ಅಧಿಕಾರ ವಹಿಸಿಕೊಂಡರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw