ಚುನಾವಣಾ ಕಸರತ್ತು: ಫಲಾನುಭವಿಗಳ ಸಮಾವೇಶ ನಡೆಸಿದ ಸೋಮಣ್ಣ
ಚಾಮರಾಜನಗರ: ಹಳೇ ಮೈಸೂರು ಭಾಗದ ಚುನಾವಣಾ ಉಸ್ತುವಾರಿ ಪಡೆದಿರುವ ವಸತಿ ಸಚಿವ ಸೋಮಣ್ಣ ಮತಬೇಟೆ ಅಖಾಡಕ್ಕೆ ಇಳಿದಿದ್ದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಫಲಾನುಭವಿಗಳ ಸಮಾವೇಶ ನಡೆಸಿದರು.
ಗುಂಡ್ಲುಪೇಟೆ ಪಟ್ಟಣದ ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿದ್ದ ಫಲಾನುಭವಿ ಸಮಾವೇಶದಲ್ಲಿ ಜಿಲ್ಲಾದ್ಯಂತ ಆಯ್ಕೆಯಾಗಿದ್ಧ ಫಲಾನುಭವಿಗಳಿಗೆ ವಾಹನಗಳು ಸೇರಿದಂತೆ ಇತರೆ ಸಾಧನ ಸಲಕರಣೆಗಳನ್ನು ಸೋಮಣ್ಣ ವಿತರಣೆ ಮಾಡಿದರು.
ಕಾರ್ಯಕ್ರಮ ಉದ್ಘಾಟಿಸಿ ಸಚಿವ ಸೋಮಣ್ಣ ಮಾತನಾಡಿ, ಜನರ ಜೀವನ ಮೇಲ್ಫಂಕ್ತಿಗರ ತೆಗೆದುಕೊಂಡು ಹೋಗಲು ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ, ಬಿಜೆಪಿ ಸರ್ಕಾರ ಬಂದ ಬಳಿಕ ಅರ್ಹ ಫಲಾನುಭವಿಗಳಿಗೆ ನೇರವಾಗಿ ಬ್ಯಾಂಕ್ ಖಾತೆ ಜಮಾ ಮಾಡಲಾಗುತ್ತಿದ್ದು ಯೋಜನೆ ಹಣ ಸೋರಿಕೆಯಾಗದೇ ಸಂಪೂರ್ಣವಾಗಿ ಜನರಿಗೆ ತಲುಪುತ್ತಿದೆ ಎಂದರು.
ಇನ್ನು, ಶಾಸಕ ಎನ್.ಮಹೇಶ್ ಮಾತನಾಡಿ, 90ರ ದಶಕದ ವರೆಗೆ ಪುರುಷ ಪ್ರಧಾನ ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಕಿಕೊಂಡಿದ್ದವು. ಆದರೆ ಈಗ ಮೋದಿ ಸರ್ಕಾರ ಮಹಿಳಾ ಪರ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಕರ್ನಾಟಕ ಸರ್ಕಾರ ವಿವಿಧ 68 ಹೊಸ ಜನಪರ ಯೋಜನೆಗಳನ್ನು ಜಾರಿ ಮಾಡಿದ್ದು, ಅದನ್ನು ಈಗ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಒಟ್ಟಿನಲ್ಲಿ ಸಚಿವ ಸೋಮಣ್ಣ ಹಾಗೂ ಬಿಜೆಪಿ ಶಾಸಕರು ಫಲಾನುಭವಿಗಳ ಸಮಾವೇಶದ ಮೂಲಕ ಮತಬೇಟೆ ಆರಂಭಿಸಿದ್ದಾರೆ.ಇದು ಎಷ್ಟರ ಮಟ್ಟಿಗೆ ಫಲ ನೀಡಲಿದೆ ಎಂಬುದು ಕಾದು ನೋಡಬೇಕಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw