ಸೋತಾಗಿದೆ, ಏನು ಮಾತಾಡಲಿ? ಕ್ಷೇತ್ರಕ್ಕಿಂತ ಪಕ್ಷ ದೊಡ್ಡದು: ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ ಸೋಮಣ್ಣ
ಸೋತಾಗಿದೆ, ಏನು ಮಾತಾಡಲಿ? ಮಾತಾಡೋದು ಅಗತ್ಯ ಇಲ್ಲ. ಸೋತಿದ್ದೇನೆ ಅಷ್ಟೇ. ಹೈಕಮಾಂಡ್ ಸೂಚನೆ ಮೇರೆಗೆ ಹೋಗಿ ಸ್ಪರ್ಧಿಸಿದ್ದೆ. ಇದನ್ನ ಚಾಲೆಂಜ್ ಆಗಿ ತೆಗೆದುಕೊಂಡೆ, ಪ್ರತಿಯೊಂದಕ್ಕೂ ಕಾಲ ಅಂತ ಇರುತ್ತದೆ. ನನ್ನ ಕ್ಷೇತ್ರ ಚಿನ್ನದಂತೆ ಇತ್ತು. ಹೈಕಮಾಂಡ್ ಹೇಳಿತೆಂದು ಹೋದೆ, ಜನ ತೀರ್ಮಾನ ಮಾಡಿದ್ದಾರೆ. ಕ್ಷೇತ್ರಕ್ಕಿಂತ ಪಕ್ಷ ದೊಡ್ಡದು, ಪಕ್ಷದ ಮಾತು ಕೇಳಿದೆ ಅಷ್ಟೇ ಎಂದು ಹೈಕಮಾಂಡ್ ವಿರುದ್ಧ ವಿ.ಸೋಮಣ್ಣ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
.ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಿರುವುದು ಬಿಜೆಪಿಯ ಈ ಸ್ಥಿತಿಗೆ ಕಾರಣವೇ ಅನ್ನೋ ಪ್ರಶ್ನೆಗೆ ಉತ್ತರಿಸಿದ ಅವರು, ಯಡಿಯೂರಪ್ಪ ಅವರನ್ನು ಪಕ್ಷ ಮೂಲೆಗುಂಪು ಮಾಡಿಲ್ಲ. ಅವರ ನಾಯಕತ್ವದಲ್ಲಿ ಚುನಾವಣೆ ಮಾಡಿದ್ದೀವಲ್ಲ? ಯಡಿಯೂರಪ್ಪ ಹೇಳಿದ್ದಾರಾ ಮೂಲೆಗುಂಪು ಮಾಡಿದ್ದಾರೆ ಅಂತ ಎಂದು ಮರು ಪ್ರಶ್ನೆ ಹಾಕಿದರು.
ಸೋತ ತಕ್ಷಣ ಎಲ್ಲವೂ ಮುಗಿದು ಹೋಯ್ತಾ? ಪಕ್ಷಕ್ಕೂ ಹಿನ್ನಡೆ ಆಗಿದ್ದು ನಮಗೆಲ್ಲ ಎಚ್ಚರಿಕೆ ಗಂಟೆ, ಜನರ ತೀರ್ಮಾನ ಇದು, ಬದ್ಧರಾಗಬೇಕು. ದೇಶಕ್ಕೆ ಮೋದಿ ಪ್ರಶ್ನಾತೀತ ನಾಯಕರು, ಅವರ ಕೆಲಸಗಳು ಅವಿಸ್ಮರಣೀಯವಾದದ್ದು, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಸ್ಕೀಮ್ ಗಳೇ ಅವರ ಗೆಲುವಿಗೆ ಕಾರಣ ಎಂದಿದ್ದಾರೆ.
ಕಾಂಗ್ರೆಸ್ ನಲ್ಲಿ ಯಾರು ಸಿಎಂ ಆದ್ರೆ ಉತ್ತಮ ಅನ್ನೋ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಅವರ ಪಕ್ಷದ ನಿರ್ಧಾರ. ಡಿ.ಕೆ. ಶಿವಕುಮಾರ್ ನಮ್ಮ ತಾಲ್ಲೂಕಿನವರು. ಸಿದ್ದರಾಮಯ್ಯ ಹಿರಿಯ ನಾಯಕರು, ಜೊತೆಗೆ ಈಗಾಗಲೇ ಒಮ್ಮೆ ಮುಖ್ಯಮಂತ್ರಿ ಆಗಿದ್ದಾರೆ. ಈಗ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕಾಗಿರುವವರು ಎಂದು ಡಿ.ಕೆ.ಶಿವಕುಮಾರ್ ಪರ ಪರೋಕ್ಷವಾಗಿ ಅಭಿಪ್ರಾಯ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw