ಬೆಂಗಳೂರಲ್ಲಿ ಪ್ರತಿಪಕ್ಷಗಳ ಸಭೆ: ಸೋನಿಯಾ ಗಾಂಧಿ ಸಾರಥ್ಯ..? - Mahanayaka

ಬೆಂಗಳೂರಲ್ಲಿ ಪ್ರತಿಪಕ್ಷಗಳ ಸಭೆ: ಸೋನಿಯಾ ಗಾಂಧಿ ಸಾರಥ್ಯ..?

10/07/2023

ಜುಲೈ 17-18ರಂದು ಬೆಂಗಳೂರಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಗೆ ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಹಾಜರಾಗುವ ಸಾಧ್ಯತೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸೋಮವಾರ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ಮನವಿ ಸಲ್ಲಿಸಿದ್ದು, ಸೋನಿಯಾ ಗಾಂಧಿಯವರು ಆಗಮಿಸುವ ನಿರೀಕ್ಷೆಯಿರುವುದಾಗಿ ಹೇಳಿದರು.

ಈ ದೇಶವನ್ನು ಬದಲಿಸಲು ಇಚ್ಛಿಸುವ ಎಲ್ಲಾ ರಾಜಕೀಯ ನಾಯಕರನ್ನೂ ಸ್ವಾಗತಿಸುವುದಾಗಿ ನುಡಿದ ಡಿ.ಕೆ.ಶಿವಕುಮಾರ್‌, ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಈ ಸಭೆಯನ್ನು ನಡೆಸಲಾಗುತ್ತಿದೆ. ಈಗಾಗಲೇ ಮೊದಲ ಸಭೆ ಜೂನ್ 23 ರಂದು ಪಾಟ್ನಾದಲ್ಲಿ ನಡೆದಿರುವುದಾಗಿ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ