ಸೋನು ಶ್ರೀನಿವಾಸ ಗೌಡಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬೆಂಗಳೂರು: ಅಕ್ರಮವಾಗಿ ಮಗುವನ್ನು ದತ್ತಪಡೆದುಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾ ಸ್ಟಾರ್ ಸೋನಿ ಶ್ರೀನಿವಾಸ ಗೌಡ ಜೈಲುಪಾಲಾಗಿದ್ದಾರೆ.
ಸದ್ಯ ಸೋನು ಗೌಡ ಅವರನ್ನು ಪರಪ್ಪನ ಅಗ್ರಹಾರದತ್ತ ಕರೆದೊಯ್ಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಯ ದೂರಿನ ಮೇರೆಗೆ ಸೋನು ಶ್ರೀನಿವಾಸಗೌಡ ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದರು. ಇಂದಿಗೆ ಸೋನುಗೆ ಪೊಲೀಸ್ ಕಸ್ಟಡಿ ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು.
ಸದ್ಯ ಕೋರ್ಟ್ 14 ದಿನಗಳ ಕಾಲ ಸೋನುಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಏಪ್ರಿಲ್ 8ರವರೆಗೆ ನ್ಯಾಯಾಂಗ ಬಂಧನ ಆದೇಶ ನೀಡಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth