ಮತ್ತೆ ಎದೆನೋವಿನಿಂದ ಅಸ್ವಸ್ಥರಾದ ಗಂಗೂಲಿ | ಆಸ್ಪತ್ರೆಗೆ ದಾಖಲು

27/01/2021

ಕೋಲ್ಕತ್ತಾ:  ಟೀಮ್ ಇಂಡಿಯಾದ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಮತ್ತೆ ಎದೆನೋವಿನಿಂದ ಅಸ್ವಸ್ಥಗೊಂಡಿದ್ದು,  ಅವರನ್ನು ಚಿಕಿತ್ಸೆಗಾಗಿ ಕೋಲ್ಕತ್ತಾದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚೆಗಷ್ಟೆ ಲಘು ಹೃದಯಾಘಾತಕ್ಕೊಳಗಾಗಿದ್ದ ಗಂಗೂಲಿ ಅವರು ಚೇತರಿಸಿಕೊಂಡಿದ್ದರು. ಆದರೆ ಇದೀಗ ಮತ್ತೆ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಗೂಲಿ ಅವರಿಗೆ ಎರಡನೆಯ ಆಂಜಿಯೋಪ್ಲಾಸ್ಟಿ ಮಾಡಬೇಕಾಗಿತ್ತು. ಆದರೆ, ನಂತರದ ಹಂತದಲ್ಲಿ ಮಾಡಬಹುದು ಎಂದು ವೈದ್ಯರ ತಂಡ ನಿರ್ಣಯ ತೆಗೆದುಕೊಂಡಿತ್ತು ಎಂದು ತಿಳಿದು ಬಂದಿದೆ. ಸದ್ಯ ಗಂಗೂಲಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ. ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

Exit mobile version