ಮೃತ ಕಾಂಗ್ರೆಸ್ ಕಾರ್ಯಕರ್ತನಿಗೆ ಹೆಗಲು ನೀಡಿದ ಸ್ಪೀಕರ್ ಯು.ಟಿ.ಖಾದರ್ - Mahanayaka

ಮೃತ ಕಾಂಗ್ರೆಸ್ ಕಾರ್ಯಕರ್ತನಿಗೆ ಹೆಗಲು ನೀಡಿದ ಸ್ಪೀಕರ್ ಯು.ಟಿ.ಖಾದರ್

prasthath
05/06/2023

ನಿಧನ ಹೊಂದಿದ ಕಾಂಗ್ರೆಸ್ ಕಾರ್ಯಕರ್ತನ ಮೃತದೇಹದ ಚಟ್ಟಕ್ಕೆ ಹೆಗಲು ಕೊಟ್ಟು ಅಂತ್ಯಸಂಸ್ಕಾರ ಮಾಡಲು ಸ್ಪೀಕರ್ ಯು.ಟಿ.ಖಾದರ್ ಅವರು ಸಹಾಯ ಮಾಡಿದ್ರು.


Provided by

ಕುರ್ನಾಡು ಮಿತ್ತಕೋಡಿ ವೆಂಕಪ್ಪ ಕಾಜವ ಅವರ ಪುತ್ರ ಹಾಗೂ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವರ ಸಹೋದರ ಶರತ್ ಕಾಜವ ಎಂಬುವವರು ಹೃದಯಾಘಾತದಿಂದ ನಿಧನರಾಗಿದ್ದರು. ಅವರ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಶವದ ಚಟ್ಟಕ್ಕೆ ಹೆಗಲು ಕೊಟ್ಟು ಸಹಕರಿಸಿದರು.

ಸಾಮಾಜಿಕ ಕಾರ್ಯಕರ್ತನಾಗಿ, ಸಾಮಾಜಿಕ ಮತ್ತು ಧಾರ್ಮಿಕವಾಗಿ ಸಮಾಜದಲ್ಲಿ ತೊಡಗಿಸಿಕೊಂಡಿದ್ದ ಶರತ್ ಕಾಜವ ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿಯೂ ಗುರುತಿಸಿಕೊಂಡಿದ್ದರು. ಶರತ್ ಕಾಜವ ಅವರು ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದ ಶಾಸಕ ಯು.ಟಿ.ಖಾದರ್ ಅವರು ಪೂರ್ವಯೋಜಿತ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಶರತ್ ಅವರ ಮನೆಗೆ ಆಗಮಿಸಿ ಸಂತಾಪ ಸೂಚಿಸಿದರು. ಅಲ್ಲದೆ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ ಅವರು ಸಂಬಂಧಿಕರೊಂದಿಗೆ ತಾವು ಕೂಡಾ ಶವದ ಚಟ್ಟಕ್ಕೆ ಹೆಗಲು ಕೊಟ್ಟು ಸಹಕಾರ ನೀಡಿದರು.


Provided by

 ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ