ಸ್ಪೈಸ್​​​​ಜೆಟ್ ವಿಮಾನದಲ್ಲಿ ಬೆಂಕಿ: ದಿಲ್ಲಿ ಏರ್ ಪೋರ್ಟ್ ನಲ್ಲಿ ಕೆಲಕಾಲ ಆತಂಕ - Mahanayaka
3:05 AM Friday 20 - September 2024

ಸ್ಪೈಸ್​​​​ಜೆಟ್ ವಿಮಾನದಲ್ಲಿ ಬೆಂಕಿ: ದಿಲ್ಲಿ ಏರ್ ಪೋರ್ಟ್ ನಲ್ಲಿ ಕೆಲಕಾಲ ಆತಂಕ

25/07/2023

ವಿಮಾನದ ನಿರ್ವಹಣೆ ಮಾಡುತ್ತಿರುವ ಸಂದರ್ಭದಲ್ಲಿ ಸ್ಪೈಸ್​​​​ಜೆಟ್ ವಿಮಾನವೊಂದರಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅದೃಷ್ಟವಶಾತ್ ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಸ್ಪೈಸ್​​ಜೆಟ್ ವಿಮಾನಯಾನ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಎಟಿಆರ್ ವಿಮಾನದ ನಿರ್ವಹಣಾ ಕಾರ್ಯ ಪ್ರಗತಿಯಲ್ಲಿದ್ದಾಗ ಒಂದು ಎಂಜಿನ್‌ನಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಎಂಜಿನಿಯರ್​​ಗಳ ಗಮನಕ್ಕೆ ಬಂದಿದೆ. ತಕ್ಷಣವೇ ಬೆಂಕಿ ನಂದಿಸಲು ಅಗ್ನಿಶಾಮಕ ದಳವನ್ನು ಸ್ಥಳಕ್ಕೆ ಕರೆಸಲಾಯಿತು ಎಂದು ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಈ ಘಟನೆಯನ್ನು ಟ್ಯಾಕ್ಸಿವೇಯಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಮೊಬೈಲ್ ಕ್ಯಾಮರಾದಲ್ಲಿ ಚಿತ್ರೀಕರಿಸಿದ್ದಾರೆ. ದೂರದಲ್ಲಿ ನಿಂತಿದ್ದ ವಿಮಾನದಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಹಾಗೂ ದಟ್ಟ ಹೊಗೆ ಹೊರಸೂಸುತ್ತಿರುವುದು ವಿಡಿಯೋದಲ್ಲಿ ಕಾಣಿಸಿದೆ.

ಸ್ಪೈಸ್​​ಜೆಟ್ ಅನ್ನು ವಿಸ್ತರಿತ ಕಣ್ಗಾವಲು ವ್ಯಾಪ್ತಿಯಿಂದ ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ ಹೊರಗಿಟ್ಟ ದಿನವೇ ಈ ಘಟನೆ ಸಂಭವಿಸಿದೆ. ಹಲವು ಸುತ್ತಿನ ತಪಾಸಣೆಯ ಬಳಿಕ ಡಿಜಿಸಿಎ ಈ ಕ್ರಮ ಕೈಗೊಂಡಿತ್ತು. ವಿಮಾನಕ್ಕೆ ಬೆಂಕಿಹೊತ್ತಿದ ಘಟನೆ ಬಗ್ಗೆ ಡಿಜಿಸಿಎ ತನಿಖೆಗೆ ಆದೇಶ ನೀಡಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ