ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ರಾಜ್ಯ ಸರ್ಕಾರವನ್ನು ತರಾಟೆಗೆತ್ತಿಕೊಂಡ ಸಿದ್ದರಾಮಯ್ಯ - Mahanayaka
8:26 PM Wednesday 11 - December 2024

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ರಾಜ್ಯ ಸರ್ಕಾರವನ್ನು ತರಾಟೆಗೆತ್ತಿಕೊಂಡ ಸಿದ್ದರಾಮಯ್ಯ

siddaramaiha
25/08/2021

ಮೈಸೂರು: ಚಾಮುಂಡಿಬೆಟ್ಟದಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು,  ರಾಜ್ಯ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದು, ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ, ಜನರಲ್ಲಿ ಧೈರ್ಯ ತುಂಬಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಅವರು, ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ. ಪೊಲೀಸರು ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ, ಭಯಭೀತ ಜನರಲ್ಲಿ ಧೈರ್ಯ ತುಂಬಬೇಕು ಎಂದು ಒತ್ತಾಯಿಸಿದ್ದಾರೆ.

ಮೈಸೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ಅಪರಾಧಗಳ‌ ಸಂಖ್ಯೆ‌ ಹೆಚ್ಚಾಗುತ್ತಿದೆ. ಮುಖ್ಯಮಂತ್ರಿಗಳು‌, ಬಹಳಷ್ಟು ಬೇಗ ಸಂಪುಟ ವಿಸ್ತರಣೆಯ ಸಂಕಟದಿಂದ‌ ಪಾರಾಗಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳ ನಿಯಂತ್ರಣಕ್ಕೆ ಗಮನ ಹರಿಸಬೇಕು ಎಂದು ತರಾಟೆಗೆತ್ತಿಕೊಂಡಿದ್ದಾರೆ.

ಇನ್ನಷ್ಟು ಸುದ್ದಿಗಳು…

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಘಟನೆಯನ್ನು ವಿವರಿಸಿದ ಸಂತ್ರಸ್ತ ವಿದ್ಯಾರ್ಥಿನಿಯ ಸ್ನೇಹಿತ

ಕ್ಯಾನ್ಸರ್ ಪೀಡಿತ ಮುಸ್ಲಿಮ್ ಮಹಿಳೆಯರಿಗೆ ನೀಡಲಾಗುವ ಸಹಾಯಧನ ಯೋಜನೆ ಹಿಂಪಡೆಯಬೇಕು, ಎಲ್ಲರಿಗೂ ಯೋಜನೆ ಜಾರಿಗೆ ತನ್ನಿ | ಯತ್ನಾಳ್ ಒತ್ತಾಯ

ಈಗ ಮನಮೋಹನ್ ಸಿಂಗ್ ಪ್ರಧಾನಿಯಾಗಿರುತ್ತಿದ್ದರೆ, ಭಾರತೀಯರು ರಕ್ಷಣೆಗಾಗಿ ಪರದಾಡಬೇಕಿತ್ತು | ನಳಿನ್ ಕುಮಾರ್ ಕಟೀಲ್

ಅಫ್ಘಾನಿಸ್ತಾನದ ಸಚಿವ ಈಗ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್!

ಅಂಬೇಡ್ಕರ್ ಸಂಶೋಧಕಿ, ದಲಿತ ಚಳುವಳಿಗಾರ್ತಿ ಡಾ.ಗೇಲ್ ಓಮ್ವೇಡ್ ನಿಧನ

ಭಾರತವು ಕಂಪೆನಿಗಳ ಗುಲಾಮಗಿರಿಯತ್ತ ಸಾಗುತ್ತಿದೆ | ಈಸ್ಟ್ ಇಂಡಿಯಾ ಕಂಪೆನಿಯನ್ನು ನೆನಪಿಸಿದ ರಾಹುಲ್ ಗಾಂಧಿ

ಇತ್ತೀಚಿನ ಸುದ್ದಿ