ರಾಮ ಮತ್ತು ಹನುಮಂತ ಬಿಜೆಪಿಯ ಕಾಪಿ ರೈಟ್ ಅಲ್ಲ: ಉಮಾ ಭಾರತಿ ಅಚ್ಚರಿಯ ಹೇಳಿಕೆ
ಬಿಜೆಪಿ ನಾಯಕಿ ಉಮಾ ಭಾರತಿ ಅವರು ನೀಡಿರುವ ಹೇಳಿಕೆ ಇದೀಗ ಬಿಜೆಪಿ ಪಾಳಯದಲ್ಲಿ ಆತಂಕ ಸೃಷ್ಟಿಸಿದ್ದು, ಪಕ್ಷದ ಹೈಕಮಾಂಡ್ ಕಡೆಗಣಿಸಿದ್ದರಿಂದ ಉಮಾ ಭಾರತಿ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಭಗವಾನ್ ರಾಮ ಮತ್ತು ಹನುಮಂತ ಬಿಜೆಪಿಯ ಕಾಪಿ ರೈಟ್ ಅಲ್ಲ(ಹಕ್ಕುಸ್ವಾಮ್ಯವಲ್ಲ) ಎಂದು ಉಮಾ ಭಾರತಿ ಹೇಳಿಕೆ ನೀಡಿದ್ದು, ಪಠಾಣ್ ಚಿತ್ರದ ವಿಚಾರವಾಗಿಯೂ ಬಲಪಂಥೀಯರ ವರ್ತನೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಠಾಣ್’ ಚಿತ್ರದ ಗಲಾಟೆಗೆ ಪ್ರತಿಭಟನೆಯ ಅಗತ್ಯವೇನಿದೆ? ‘ಬಿಜೆಪಿ ಸರ್ಕಾರದ ಸೆನ್ಸಾರ್ ಮಂಡಳಿ ಕೂಡಲೇ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದು ಹಾಕಬೇಕು. ಇದರಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದು ಅವರು ತಿರುಗೇಟು ನೀಡಿದ್ದಾರೆ.
ಯಾವುದೇ ಬಣ್ಣದ ಅವಮಾನವನ್ನು ಭಾರತ ಸಹಿಸುವುದಿಲ್ಲ. ಕೇಸರಿ ಭಾರತೀಯ ಸಂಸ್ಕೃತಿಯ ಅಸ್ಮಿತೆ, ಸೆನ್ಸಾರ್ ಮಂಡಳಿ ಈ ದೃಶ್ಯಗಳನ್ನು ಕೂಡಲೇ ತೆಗೆದುಹಾಕಬೇಕು ಎಂದು ಅವರು ಹೇಳಿದ್ದಾರೆ.
ಇದೇ ವೇಳೆ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರ ವಿವಾದಾತ್ಮಕ ಹೇಳಿಕೆಯನ್ನು ಬೆಂಬಲಿಸಿದ ಉಮಾಭಾರತಿ, ಹಿಂದೂಗಳು ತಮ್ಮ ಮನೆಯಲ್ಲಿ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ರಾಜ್ಯದಲ್ಲಿ ಹನುಮಂತನ ಮಂದಿರ ನಿರ್ಮಾಣ ಮಾಡುವುದಾಗಿ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉಮಾಭಾರತಿ, ರಾಮ ಮತ್ತು ಹನುಮಂತ ಬಿಜೆಪಿ ಕಾಪಿ ರೈಟ್ ಅಲ್ಲ ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw