ಪ್ರಾದೇಶಿಕ ಪಕ್ಷಗಳಿಗೆ ಉತ್ತರ ಕರ್ನಾಟಕದಲ್ಲಿ ನೆಲೆ ಇಲ್ಲ: ಜನಾರ್ದನ ರೆಡ್ಡಿಗೆ ಶ್ರೀರಾಮುಲು ಟಾಂಗ್
ಬಳ್ಳಾರಿ: ಜೆಡಿಎಸ್ ಸೇರಿದಂತೆ ಯಾವುದೇ ಪ್ರಾದೇಶಿಕ ಪಕ್ಷಗಳಿಗೆ ಉತ್ತರ ಕರ್ನಾಟಕದಲ್ಲಿ ನೆಲೆ ಇಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಟಾಂಗ್ ನೀಡಿದ್ದಾರೆ.
ಇಲ್ಲಿ ನನ್ನ ಮುಖ ನೋಡಿಯೋ, ಇನ್ನೊಬ್ಬರ ಮುಖ ನೋಡಿಯೋ ಜನ ಮತ ಹಾಕಲ್ಲ, ಪ್ರಧಾನಿ ಮೋದಿಯವರ ಮುಖ ನೋಡಿ ಮತ ಹಾಕ್ತಾರೆ. ಕಲ್ಯಾಣ ಕರ್ನಾಟಕದಲ್ಲಿಯೂ ಬಿಜೆಪಿ ಗೆಲ್ಲಲಿದೆ, ಇಲ್ಲಿ ಪ್ರಾದೇಶಿಕ ಪಕ್ಷದ ಮಾತೇ ಇಲ್ಲ ಎಂದು ಅವರು ಟಾಂಗ್ ನೀಡಿದ್ದಾರೆ.
ಜನಾರ್ದನ ರೆಡ್ಡಿ ಅವರ ಪಕ್ಷದ ಕುರಿತು ಪರೋಕ್ಷವಾಗಿಯೇ ಟಾಂಗ್ ನೀಡಿದ ಶ್ರೀರಾಮುಲು, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದ್ರೂ ಪಕ್ಷ ಕಟ್ಟ ಬಹುದು. ಆದ್ರೆ, ಜನರ ಒಲವು ಕೂಡ ಬೇಕಲ್ವಾ? ಎಂದು ಪ್ರಶ್ನಿಸಿದ್ರು.
ಬಿಜೆಪಿಯಲ್ಲಿ ವಲಸಿಗರ ಹಾವಳಿಯಿಂದಾಗಿ ಈಗಾಗಲೇ ನಾಯಕರು ಮತ್ತು ಕಾರ್ಯಕರ್ತರ ನಡುವಿನ ವೈಮನಸ್ಸು ನಿಧಾನವಾಗಿ ಹೊರ ಬರುತ್ತಿದೆ. ಟಿಕೆಟ್ ಘೋಷಣೆ ವೇಳೆ ಮತ್ತಷ್ಟು ಇದು ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಇತ್ತ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಘೋಷಣೆ ಮಾಡಿರುವುದು ಇದೀಗ ಉತ್ತರ ಕನ್ನಡ ಬಿಜೆಪಿ ನಾಯಕರಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw