SSLC  Result: ಕುಂದಾಪುರದ ಶ್ರೀಲಹರಿ ದೇವಾಡಿಗ ಅವರಿಗೆ ರಾಜ್ಯದಲ್ಲೇ ದ್ವಿತೀಯ ಸ್ಥಾನ

srilahari devadiga
08/05/2023

ಕುಂದಾಪುರ: ಎಸ್‍ ಎಸ್‍ ಎಲ್‍ ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ರೀಲಹರಿ ದೇವಾಡಿಗ 624 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಹೆಮ್ಮಾಡಿ ಸಮೀಪದ ಜಾಲಾಡಿ ನಿವಾಸಿ ಉದ್ಯಮಿ, ವಾದ್ಯ ತಂಡ ನಡೆಸುತ್ತಿರುವ ಶ್ರೀಧರ್ ದೇವಾಡಿಗ ಹಾಗೂ ಕುಂದಾಪುರ ನಗರ ಯೋಜನಾ ಪ್ರಾಧಿಕಾರದಲ್ಲಿ ಬೆರಳಚ್ಚುಗಾರರಾಗಿರುವ ಲಲಿತಾ ಎಸ್. ದೇವಾಡಿಗ ದಂಪತಿಗಳ ಇಬ್ಬರು ಪುತ್ರಿಯರ ಪೈಕಿ ಶ್ರೀಲಹರಿ ಕಿರಿಯವಳು. ಒಂದನೇ ತರಗತಿಯಿಂದ ವೆಂಕಟರಮಣ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸಂಸ್ಕೃತದಲ್ಲಿ 125, ಕನ್ನಡ 100, ಇಂಗ್ಲೀಷ್ 100, ವಿಜ್ಞಾನ 100, ಸಮಾಜ 100, ಗಣಿತದಲ್ಲಿ 99 ಅಂಕ ಪಡೆದಿದ್ದಾರೆ.

ಯಾವುದೇ ಟ್ಯೂಷನ್ ಹೋಗಿಲ್ಲ. ನಿತ್ಯ ಓದುತ್ತಿದ್ದೆ. ಪರೀಕ್ಷೆ ಸಂದರ್ಭ ಹೆಚ್ಚು ಓದುತ್ತಿದ್ದೆ. ತಂದೆ-ತಾಯಿ, ಮನೆಯವರು ಹಾಗೂ ಶಿಕ್ಷಕರ ಪ್ರೋತ್ಸಾಹ ಈ ಸಾಧನೆಗೆ ಕಾರಣ. 620 ಅಧಿಕ ಅಂಕದ ನಿರೀಕ್ಷೆಯಿತ್ತು. ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿರುವುದು ಖುಷಿಯಾಗಿದೆ. ಮುಂದೆ ವಿಜ್ಞಾನ ವಿಭಾಗದಲ್ಲಿ ಮುಂದುವರಿದು ವೈದ್ಯಳಾಗುವಾಸೆ ಇದೆ ಎಂದು ಶ್ರಿಲಹರಿ ಹೇಳಿದರು‌.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version