ಶ್ರೀನಗರದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರು ಹತ್ಯೆ - Mahanayaka
10:15 PM Wednesday 12 - March 2025

ಶ್ರೀನಗರದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರು ಹತ್ಯೆ

encounter
30/03/2022

ಶ್ರೀನಗರ: ಶ್ರೀನಗರದ ರೈನವರಿ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ಉಗ್ರಗಾಮಿಗಳು ಬುಧವಾರ ಬೆಳಗ್ಗಿನ ಜಾವ ಹತ್ಯೆಗೀಡಾಗಿರುವ ಬಗ್ಗೆ ವರದಿಯಾಗಿದೆ.

ಹತ್ಯೆಗೀಡಾದ ಇಬ್ಬರು ಉಗ್ರರು ಇತ್ತೀಚಿನ ದಿನಗಳಲ್ಲಿ ನಾಗರಿಕರ ಹತ್ಯೆ ಸೇರಿದಂತೆ ಹಲವು ಉಗ್ರಗಾಮಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರದ ಇನ್ಸ್ ಪೆಕ್ಟರ್ ಜನರಲ್ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳದಿಂದ ಶಸ್ತ್ರಾಸ್ತ್ರಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆಗೀಡಾದ ಉಗ್ರರಲ್ಲಿ ಓರ್ವ ರಯೀಸ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು ಈತ ಈ ಹಿಂದೆ ಪತ್ರಕರ್ತನಾಗಿದ್ದು, ಈತನ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿದ್ದವು.


Provided by

ಕಳೆದ ವರ್ಷ ಆಗಸ್ಟ್‌ನಲ್ಲಿ ಲಷ್ಕರ್-ಇ-ತೊಯ್ಬಾ ಸಂಘಟನೆಗೆ ಸೇರ್ಪಡೆಯಾಗಿದ್ದನೆಂದು ಪೊಲೀಸರು ಹೇಳಿದ್ದಾರೆ. ಇನ್ನೊಬ್ಬ ಉಗ್ರನನ್ನು ಬಿಜ್‌ಬೆಹರಾ ಹಿಲಾಲ್ ಅಹ್ಮದ್‌ ಎಂದು ಗುರುತಿಸಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬ್ಯಾಂಕ್ ಸಿಬ್ಬಂದಿಯ ನಿರ್ಲಕ್ಷ್ಯ: ರಾತ್ರಿಯಿಡೀ ಬ್ಯಾಂಕ್ ಲಾಕರ್‌ನಲ್ಲೇ ಸಿಲುಕಿದ್ದ ವೃದ್ಧ

ಉಕ್ರೇನ್‌ ನ ಮೈಕೊಲೈವ್‌ ಮೇಲೆ ರಷ್ಯಾ ದಾಳಿ: 12ಕ್ಕೆ ಏರಿಕೆಯಾದ ಮೃತರ ಸಂಖ್ಯೆ

SSLC  ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ನೀಡಿದ್ದಕ್ಕೆ 7 ಸಿಬ್ಬಂದಿ ಅಮಾನತು

ಮೈ ಮುಟ್ಟಿದ ವಕೀಲನಿಗೆ ಚೇರ್‌ ನಿಂದ ಹಲ್ಲೆಗೆ ಮುಂದಾದ ವಕೀಲೆ

ಇತ್ತೀಚಿನ ಸುದ್ದಿ