SSLC Exam result 2021 | ಓರ್ವ ವಿದ್ಯಾರ್ಥಿಯನ್ನು ಹೊರತುಪಡಿಸಿ, ಎಲ್ಲರೂ ಪಾಸ್
ಬೆಂಗಳೂರು: ಕೊರೊನಾ ನಡುವೆಯೂ ನಡೆದ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಶೇ.99.9 ಫಲಿತಾಂಶ ದಾಖಲಾಗಿದ್ದು, ಕೊರೊನಾ ಹಿನ್ನೆಲೆಯಲ್ಲಿ ಓರ್ವಳು ವಿದ್ಯಾರ್ಥಿಯನ್ನು ಹೊರತುಪಡಿಸಿ ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಮಾಡಿಲ್ಲ.
ಕೊರೊನಾ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ನಿರ್ಧರಿಸಿದ್ದೆವು. ಆದರೆ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಬದಲಿ ಪರೀಕ್ಷೆ ಬರೆದ ಕಾರಣ ಡಿಬಾರ್ ಆಗಿದ್ದು, ಇದರಿಂದಾಗಿ ಶೇ.100 ಫಲಿತಾಂಶ ಬಂದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ಇನ್ನೂ ಪರೀಕ್ಷೆಯಲ್ಲಿ 1,28,931 ಮಕ್ಕಳು ಎ+ ಗ್ರೇಡ್ ಪಡೆದುಕೊಂಡಿದ್ದಾರೆ. 2,50,317 ಮಕ್ಕಳು ಎ ಗ್ರೇಡ್ ಪಡೆದುಕೊಂಡಿದ್ದಾರೆ. 2,87,694 ವಿದ್ಯಾರ್ಥಿಗಳು ಬಿ ಗ್ರೇಡ್ ಪಡೆದುಕೊಂಡಿದ್ದಾರೆ. 1,13,610 ವಿದ್ಯಾರ್ಥಿಗಳು ಸಿ ಗ್ರೇಡ್ ಪಡೆದುಕೊಂಡಿದ್ದಾರೆ. 157 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ನೋಡಲು https://sslc.karnataka.gov.in/ಗೆ ಭೇಟಿ ನೀಡಬಹುದಾಗಿದೆ. ಏಕಾಏಕಿ ಎಲ್ಲರೂ ವೆಬ್ ಸೈಟ್ ಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸರ್ವರ್ ಬ್ಯುಸಿ ಬಂದಿರಬಹುದು. ಈ ಬಗ್ಗೆ ವಿದ್ಯಾರ್ಥಿಗಳು ಆತಂಕ್ಕೀಡಾಗುವುದು ಬೇಡ. ಇಂದು ರಾತ್ರಿ ಅಥವಾ ನಾಳೆಯೊಳಗೆ ನಿಮ್ಮ ಫಲಿತಾಂಶಗಳನ್ನು ಪಡೆದುಕೊಳ್ಳಲು ಸಾಧ್ಯವಾಗಬಹುದು.
ಇನ್ನಷ್ಟು ಸುದ್ದಿಗಳು…
ಎಟಿಎಂ ಒಡೆಯುತ್ತಿದ್ದ ವೇಳೆ ಎಟಿಎಂನಲ್ಲಿ ಸಿಕ್ಕಿಹಾಕಿಕೊಂಡ ಕಳ್ಳ! | ಮುಂದೆ ನಡೆದದ್ದೇನು ಗೊತ್ತಾ?
ತಾಯಾಣೆ ನಾನು ಅಷ್ಟೊಂದು ಹಣವನ್ನು ಎಂದಿಗೂ ನೋಡೇ ಇಲ್ಲ | ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ
ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿದ ಟ್ರಕ್ : 8 ಕಾರ್ಮಿಕರ ದಾರುಣ ಸಾವು