ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಈ ಬಾರಿ ಬಾಲಕಿಯರದ್ದೇ ಮೇಲುಗೈ
ಬೆಂಗಳೂರು: ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಮಧ್ಯಾಹ್ನ 12:30ಕ್ಕೆ ಫಲಿತಾಂಶ ಪ್ರಕಟಗೊಂಡಿದೆ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಈ ಬಾರಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಪರೀಕ್ಷೆ ಬರೆದ 8 ಲಕ್ಷದ 53 ಸಾವಿರದ 436 ವಿದ್ಯಾರ್ಥಿಗಳ ಪೈಕಿ, ಈ ಬಾರಿ 7 ಲಕ್ಷದ 30 ಸಾವಿರದ 881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದ ಸಾಧನೆ ಮಾಡಿದ್ದಾರೆ. 329 ವಿದ್ಯಾರ್ಥಿಗಳು 624 ಅಂಕ ಪಡೆದಿದ್ದರೆ, 472 ವಿದ್ಯಾರ್ಥಿಗಳು 623 ಅಂಕ ಪಡೆದಿದ್ದಾರೆ.
ಒಟ್ಟು 40,061 ಮಂದಿ ವಿದ್ಯಾರ್ಥಿಗಳು ಗ್ರೇಸ್ ಮಾರ್ಕ್ ಪಡೆದು ಪಾಸಾಗಿದ್ದು, ಈ ಪೈಕಿ 35,931 ವಿದ್ಯಾರ್ಥಿಗಳು ಕೇವಲ ಒಂದು ವಿಷಯದಲ್ಲಿ ಗ್ರೇಸ್ ಮಾರ್ಕ್ ಪಡೆದಿದ್ದಾರೆ.
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದ್ದು, ಮಧ್ಯಾಹ್ನ 1 ಗಂಟೆಗೆ ಬಳಿಕ ವಿದ್ಯಾರ್ಥಿಗಳಿಗೆ ಮಂಡಳಿ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
ವಿದ್ಯಾರ್ಥಿಗಳು https://kseeb.kar.nic.in, https://sslc.karnataka.gov.in, https://karresults.nic.in ವೆಬ್ ಸೈಟ್ ಗಳಲ್ಲಿ ಮಧ್ಯಾಹ್ನ 1 ಗಂಟೆಯಿಂದ ಫಲಿತಾಂಶ ಪಡೆದುಕೊಳ್ಳಬಹುದಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪೈಪ್ ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಬಿದ್ದು ಇಬ್ಬರು ಕಾರ್ಮಿಕರ ಸಾವು
ಮತ್ತೆ ಎಲ್ ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ: ಗಾಯದ ಮೇಲೆ ಬರೆ!
ಕೆರೆಯಲ್ಲಿ ಮುಳುಗಿ 9ನೇ ತರಗತಿಯ ಇಬ್ಬರು ಬಾಲಕರು ಸಾವು
ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಟೆಸ್ಟ್ ಡ್ರೈವ್ ಮಾಡಿ ಬರುತ್ತೇನೆಂದು ಹೋದವ ಕಾರಿನೊಂದಿಗೆ ಪರಾರಿ!: ಶೋರೂಂ ಸಿಬ್ಬಂದಿ ಕಂಗಾಲು