ಟ್ಯೂಷನ್ ಗೆ ಹೋಗುತ್ತಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ
02/04/2021
ಮೀರತ್: ಟ್ಯೂಷನ್ ಗೆ ಹೋಗುತ್ತಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಯನ್ನು ಎಳೆದೊಯ್ದು ಸಾಮೂಹಿಕವಾಗಿ ಅತ್ಯಾಚಾರ ನಡೆಸಿ, ಹತ್ಯೆ ನಡೆಸಿರುವ ಘಟನೆ ಉತ್ತರಪ್ರದೇಶದ ಮೀರತ್ ನ ಸರ್ಧಾನ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಾಲ್ವರು ಯುವಕರ ತಂಡ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಅತ್ಯಾಚಾರದ ಬಳಿಕ ಬಾಲಕಿಗೆ ಬಲವಂತವಾಗಿ ವಿಷಕುಡಿಸಿ, ಸ್ಥಳದಿಂದ ಪರಾರಿಯಾಗಿದ್ದಾರೆ. ತೀವ್ರ ಅಸ್ವಸ್ಥಳಾಗಿ ಪತ್ತೆಯಾಗಿದ್ದ ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ.
ಘಟನೆ ಸಂಬಂಧ ಆರೋಪಿಗಳ ವಿರುದ್ಧ ಬಾಲಕಿಯ ಪೋಷಕರು ದೂರು ದಾಖಲಿಸಿದ್ದು, ಅತ್ಯಾಚಾರ, ಹತ್ಯೆ ಸೇರಿದಂತೆ ವಿವಿಧ ಪ್ರಕರಣಗಳಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಬೀಶ್ ಜರಿಯಮಾಲಾ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಉಳಿದವರಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.