ಎಸ್ ಬಿಐ ಗ್ರಾಹಕರಿಗೆ ಮುಖ್ಯ ಸುದ್ದಿ: ನಾಳೆ 2 ಗಂಟೆಗಳ ಕಾಲ ಬ್ಯಾಂಕಿಂಗ್ ಸೇವೆ ಇಲ್ಲ
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಮಹತ್ವದ ಮಾಹಿತಿ ಇದಾಗಿದ್ದು, ಸೆಪ್ಟಂಬರ್ 15ರಂದು 2 ಗಂಟೆಗಳ ಕಾಲ ಎಸ್ ಬಿಐ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಸೇವೆ ಲಭ್ಯವಿರುವುದಿಲ್ಲ ಎಂದು ಬ್ಯಾಂಕ್ ಹೇಳಿದ್ದು, ಈ ಬಗ್ಗೆ ಟ್ವಿಟ್ಟರ್ ನಲ್ಲಿ ಅಧಿಕೃತವಾಗಿ ಮಾಹಿತಿ ನೀಡಿದೆ.
ಬುಧವಾರ 2 ಗಂಟೆಗಳ ಕಾಲ ತಾತ್ಕಾಲಿಕವಾಗಿ ಇಂಟರ್ನೆಟ್ ಬ್ಯಾಂಕಿಂಗ್ ಸೇವೆಯನ್ನು ಸ್ಥಗಿತಗೊಳಿಸಲಾಗುವುದು. ಇದಕ್ಕೆ ಗ್ರಾಹಕರು ಸಹಕರಿಸಬೇಕು. ಸೆ.15ರ ಮಧ್ಯರಾತ್ರಿಯಿಂದ 2 ಗಂಟೆಯವರೆಗೆ ಡಿಜಿಟಲ್ ಬ್ಯಾಂಕಿಂಗ್ ಸೇವೆ ಇರುವುದಿಲ್ಲ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ.
2 ಗಂಟೆಯ ಬಳಿಕ ಗ್ರಾಹಕರು ಯಾವುದೇ ತಡೆಯಿಲ್ಲದೇ ಇಂಟರ್ನೆಟ್ ಬ್ಯಾಂಕಿಂಗ್ ನ್ನು ಬಳಸಬಹುದು ಎಂದು ಎಸ್ ಬಿಐ ಟ್ವೀಟ್ ಮಾಡಿದೆ. ಕಳೆದ ತಿಂಗಳಿನಲ್ಲಿಯೂ ಎಸ್ ಬಿಐ ನಿರ್ವಹಣೆಗಾಗಿ ಇಂಟರ್ನೆಟ್ ಬ್ಯಾಂಕಿಂಗ್ ಸೇವೆಯನ್ನು ಸ್ಥಗಿತಗೊಳಿಸಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು 8088059494 ನಂಬರ್ ನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಸೇರಿಸಿಕೊಳ್ಳಿ
ಇನ್ನಷ್ಟು ಸುದ್ದಿಗಳು…
ಆಸ್ತಿಗಾಗಿ ಸಹೋದರರ ಜಗಳ: ಕಟ್ಟಡದ ಮೇಲಿನಿಂದ ಓರ್ವ ಸಹೋದರನನ್ನು ಕೆಳಕ್ಕೆಸೆಯಲು ಯತ್ನ
ಸೋದರಳಿಯನ ಪತ್ನಿಗೆ ಹಲ್ಲೆ, ವಿಷ ಕುಡಿಸಲು ಯತ್ನ: ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಗಂಭೀರ ಆರೋಪ
ಬಟ್ಟೆ ಬದಲಿಸುತ್ತಿದ್ದ ವಿಡಿಯೋ ಮಾಡಿ, ಬೆದರಿಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ
ಎನ್ ಇಪಿ ವಿರೋಧಿಸಿ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಕ್ಯಾಂಪಸ್ ಫ್ರಂಟ್ ಯತ್ನ | ಪೊಲೀಸರಿಂದ ಲಾಠಿ ಚಾರ್ಜ್
ತಂದೆಯನ್ನು ಕೊಂದು, ಕುಡಿದು ಬಿದ್ದು ಸತ್ತ ಎಂದು ನಂಬಿಸಿದ ಪುತ್ರ | ಪುತ್ರನ ಹೈಡ್ರಾಮ ಬಯಲಾಗಿದ್ದು ಹೇಗೆ ಗೊತ್ತಾ?