SBI ಬ್ಯಾಂಕ್ ನಲ್ಲಿದೆ 1040 ಉದ್ಯೋಗ: ಅರ್ಜಿ ಸಲ್ಲಿಸುವುದು ಹೇಗೆ? - Mahanayaka

SBI ಬ್ಯಾಂಕ್ ನಲ್ಲಿದೆ 1040 ಉದ್ಯೋಗ: ಅರ್ಜಿ ಸಲ್ಲಿಸುವುದು ಹೇಗೆ?

state bank of india
21/07/2024

ಭಾರತ ದೇಶದ ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಒಂದಾಗಿರುವಂತಹ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತಹ ಒಂದು ಸಾವಿರಕ್ಕೂ ಹೆಚ್ಚು ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಿದೆ.

ಈ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಖಾಯಂ ಆಧಾರಿತ ಹಾಗೂ ಗುತ್ತಿಗೆ ಆಧಾರಿತವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅಧಿಸೂಚನೆಯಲ್ಲಿ ತಿಳಿಸಿರುವ ಅರ್ಹತೆಗಳು, ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್ ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಿಂದ ತಿಳಿದುಕೊಳ್ಳಿ.

State Bank of India recruitment 2024 — ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ವಿವರವು ಈ ಕೆಳಗಿನಂತಿವೆ.


Provided by

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳು, ಸೆಂಟ್ರಲ್ ರಿಸರ್ಚ್ ಟೀಮ್, ಪ್ರಾಡಕ್ಟ್ ಡೆವಲಪ್ಮೆಂಟ್ ಮ್ಯಾನೇಜರ್, ಲೈಷನ್ಶಿಪ್ ಮ್ಯಾನೇಜರ್, ವೈಸ್ ಪ್ರೆಸಿಡೆಂಟ್ ವೆಲ್ತ್ ಸೇರಿದಂತೆ ಒಟ್ಟು 1,040 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ.

 ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆಗಳೇನು?

State Bank of India recruitment — ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವಂತೆ ಹುದ್ದೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಪದವಿ ಸ್ನಾತಕೋತ್ತರ ಪದವಿ ಮುಗಿಸಿರುವವರು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ.

ವಯೋಮಿತಿ — ಅರ್ಜಿ ಸಲ್ಲಿಸುವಂತವರು ಅಧಿಸೂಚನೆಯ ಪ್ರಕಾರ ಕನಿಷ್ಠ 25 ವರ್ಷ ಹಾಗೂ ಗರಿಷ್ಠ 45 ವರ್ಷದ ವಯೋಮಿತಿಯಲ್ಲಿರುವವರು ಅರ್ಜಿ ಸಲ್ಲಿಸಬಹುದು.

 ಅರ್ಜಿ ಶುಲ್ಕ:

* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

* ಇವರನ್ನು ಹೊರತುಪಡಿಸಿ ಉಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂಪಾಯಿ ಪಾವತಿಸಬೇಕು.

ನೇಮಕಾತಿಗೆ ನಿಗದಿಪಡಿಸಿರುವ ಪ್ರಮುಖ ದಿನಾಂಕಗಳು :

* ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 19–07–2024

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08–08–2024

 ಅರ್ಜಿ ಹೇಗೆ ಸಲ್ಲಿಸಬೇಕು?

ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು, ಮೊದಲು ಕೆಳಗೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನೇಮಕಾತಿಯಲ್ಲಿ ನಿಗದಿಪಡಿಸಿರುವಂತಹ ಅರ್ಹತೆಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸಲು ಅರ್ಹರಿದ್ದರೆ ಮಾತ್ರ ಆನ್ಲೈನ್ ಮೂಲಕ ಸರಿಯಾದ ಮಾಹಿತಿ ಭರ್ತಿ ಮಾಡುವುದರ ಮುಖಾಂತರ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್:  https://sbi.co.in


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ