ಕರ್ನಾಟಕ ರಿಪಬ್ಲಿಕ್ ಸೇನೆಯ ರಾಜ್ಯಾಧ್ಯಕ್ಷ ಜಿಗಣಿ ಶಂಕರ್ ನಿಧನ - Mahanayaka
11:13 PM Thursday 12 - December 2024

ಕರ್ನಾಟಕ ರಿಪಬ್ಲಿಕ್ ಸೇನೆಯ ರಾಜ್ಯಾಧ್ಯಕ್ಷ ಜಿಗಣಿ ಶಂಕರ್ ನಿಧನ

Sena Jigani Shankar
25/08/2023

ಕರ್ನಾಟಕ ರಿಪಬ್ಲಿಕ್ ಸೇನೆಯ ರಾಜ್ಯಾಧ್ಯಕ್ಷ ಜಿಗಣಿ ಶಂಕರ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಹಿರಿಯ ಹೋರಾಟಗಾರ, ದಲಿತ ಪರ ಹೋರಾಟದ ಮುಂಚೂಣಿ ನಾಯಕರಲ್ಲಿ ಒಬ್ಬರಾದ ಜಿಗಣಿ ಶಂಕರ್ ಕೋಲಾರಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ತೆರಳಿದ್ದು, ಈ ವೇಳೆ ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ.

ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಜಿಗಣಿ ಬಳಿಯ ಬಂಡೇನಲ್ಲಸಂದ್ರ ಗ್ರಾಮದಲ್ಲಿರುವ ನಿವಾಸದ ಬಳಿ ವ್ಯವಸ್ಥೆ ಮಾಡಲಾಗಿದ್ದು, ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿ