ಸಿದ್ದರಾಮಯ್ಯ ಹತ್ಯೆಗೆ ಪ್ರೇರಣೆ ಹೇಳಿಕೆ: ಅಶ್ವತ್ಥ್ ನಾರಾಯಣ ವಿರುದ್ಧ FIR - Mahanayaka
9:04 AM Thursday 6 - February 2025

ಸಿದ್ದರಾಮಯ್ಯ ಹತ್ಯೆಗೆ ಪ್ರೇರಣೆ ಹೇಳಿಕೆ: ಅಶ್ವತ್ಥ್ ನಾರಾಯಣ ವಿರುದ್ಧ FIR

ashwath narayan
25/05/2023

ಮೈಸೂರು: ಟಿಪ್ಪುವನ್ನು ಹೊಡೆದು ಹಾಕಿದಂತೆಯೇ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂಬ ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ಅವರ ಹೇಳಿಕೆ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯನವರ ಹತ್ಯೆಗೆ ಪ್ರಚೋದನೆ ನೀಡುವಂತೆ ಅಶ್ವತ್ಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆದರೆ ದೂರು ನೀಡಿ ಸಾಕಷ್ಟು ದಿನಗಳಾದರೂ ಈ ದೂರಿನ ಬಗ್ಗೆ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಬುಧವಾರ ಮತ್ತೊಮ್ಮೆ ದೂರು ದಾಖಲಿಸಲಾಗಿದೆ.  ಸದ್ಯ ಈ ಬಗ್ಗೆ ದೂರು ಸ್ವೀಕರಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

ಫೆಬ್ರವರಿ 15ರಂದು ಮಂಡ್ಯ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಅಶ್ವತ್ಥ್ ನಾರಾಯಣ ಅವರು ಈ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಗ್ಗೆ ಸಿದ್ದರಾಮಯ್ಯ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟೀಕೆ, ಟಿಪ್ಪಣಿಗಳು ಕೇಳಿ ಬಂದಿದ್ದವು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ