ವಕ್ಫ್ ಕಾಯ್ದೆ: ಮುಂದಿನ ಆದೇಶದವರೆಗೆ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು: ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಮುಂದಿನ ವಿಚಾರಣೆಯವರೆಗೆ ವಕ್ಫ್ ಮಂಡಳಿಗೆ ಮುಸ್ಲಿಮೇತರರ ನೇಮಕಾತಿ ಮಾಡುವಂತಿಲ್ಲ; ಹಾಗೂ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಗುರುವಾರ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ವಕ್ಫ್ ಮಂಡಳಿಗಳಿಗೆ ಮುಸ್ಲಿಮೇತರರನ್ನು ನೇಮಕ ಮಾಡುವ ವಿವಾದದ ನಡುವೆ ಮುಂದಿನ ಆದೇಶದವರೆಗೆ ಅಂತಹ ಯಾವುದೇ ನೇಮಕಾತಿಗಳನ್ನು ಮಾಡಬಾರದು ಎಂದು ಸುಪ್ರೀಂ ಹೇಳಿದೆ.
ಈಗಾಗಲೇ ನೋಂದಾಯಿಸಲಾದ ಹಾಗೂ ದೀರ್ಘ ಕಾಲದಿಂದ ಧಾರ್ಮಿಕ ಕಾರ್ಯಕ್ರಮಗಳಿಗೆ ಬಳಸುತ್ತಿರುವ (ವಕ್ಫ್ ಬೈ ಯೂಸರ್) ಆಸ್ತಿಗಳನ್ನು ಒಳಗೊಂಡಂತೆ ಯಾವುದೇ ವಕ್ಫ್ ಆಸ್ತಿಗಳನ್ನು ಡಿನೋಟಿಫೈ ಮಾಡುವಂತಿಲ್ಲ. ಜಿಲ್ಲಾಧಿಕಾರಿಗಳು ಅವುಗಳ ಸ್ಥಿತಿಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಬಾರದು ಎಂದು ನ್ಯಾಯಾಲಯ ಸೂಚಿಸಿದೆ.
ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ತನ್ನ ಪ್ರತಿಕ್ರಿಯೆ ನೀಡಲು ಸುಪ್ರೀಂ ಕೋರ್ಟ್ ಒಂದು ವಾರಗಳ ಕಾಲಾವಕಾಶ ನೀಡಿದ್ದು, ವಕ್ಫ್ ಕಾಯ್ದೆಗೆ ತಿದ್ದುಪಡಿಗಳನ್ನು ಪ್ರಶ್ನಿಸಿರುವ ಅರ್ಜಿಗಳ ಮುಂದಿನ ವಿಚಾರಣೆಗೆ ಮೇ 5ರಂದು ನಡೆಸುವುದಾಗಿ ಹೇಳಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: