ಮೋದಿಯನ್ನು 'ಭ್ರಷ್ಟರ ಸಂಚಾಲಕ' ಎಂದು ಕರೆದ ಲಾಲೂ ಪ್ರಸಾದ್..! - Mahanayaka
6:12 AM Saturday 21 - September 2024

ಮೋದಿಯನ್ನು ‘ಭ್ರಷ್ಟರ ಸಂಚಾಲಕ’ ಎಂದು ಕರೆದ ಲಾಲೂ ಪ್ರಸಾದ್..!

06/07/2023

ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ಭ್ರಷ್ಟರ ಸಂಚಾಲಕ’ ಎಂದು ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕರೆದಿದ್ದಾರೆ.

ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ಅಜಿತ್ ಪವಾರ್ ಸೇರ್ಪಡೆಯನ್ನು ಉಲ್ಲೇಖಿಸಿದ ಲಾಲು ಪ್ರಸಾದ್ ಯಾದವ್, ಮೋದಿ ‘ಭ್ರಷ್ಟರ ಸಂಚಾಲಕ’. ಈ ಹಿಂದೆ ಯಾರನ್ನು ಭ್ರಷ್ಟ ಎಂದು ಕರೆದಿದ್ದರೋ ಅದೇ ವ್ಯಕ್ತಿಯನ್ನು ಅವರು ಮಂತ್ರಿ ಮಾಡಿದ್ದು ನೀವು ನೋಡಿಲ್ಲವೇ..? ಎಂದು ಪ್ರಶ್ನಿಸಿದರು.

ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮಹಾಮೈತ್ರಿಕೂಟವು ಕನಿಷ್ಠ 300 ಸ್ಥಾನಗಳನ್ನು ಪಡೆಯುತ್ತದೆ ಎಂದು ಹೇಳಿದ್ದಾರೆ.


Provided by

ಇನ್ನು ಯಾರು ಪ್ರಧಾನಿಯಾಗುತ್ತಾರೆಯೋ ಅವರಿಗೆ ಪತ್ನಿ ಇರಬೇಕು. ಪತ್ನಿ ಇಲ್ಲದೆ ಪ್ರಧಾನಿ ನಿವಾಸದಲ್ಲಿ ಇರುವುದು ತಪ್ಪು ಎಂದು ಅವರು ಹೇಳಿದ್ದಾರೆ. ಕಳೆದ ತಿಂಗಳು ಪಾಟ್ನಾದಲ್ಲಿ ವಿರೋಧ ಪಕ್ಷಗಳು ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಲಾಲು ಪ್ರಸಾದ್ ಯಾದವ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶೀಘ್ರದಲ್ಲೇ ಮದುವೆಯಾಗುವಂತೆ ಸಲಹೆ ನೀಡಿದ್ದರು.

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಬಹಳ ಒಳ್ಳೆಯ ಕೆಲಸ ಮಾಡಿದರು. ಲೋಕಸಭೆಯಲ್ಲಿ ಅದಾನಿ ಗುಂಪು ವಿವಾದದ ಬಗ್ಗೆ ಚೆನ್ನಾಗಿ ಮಾತನಾಡಿದರು. ನೀವು ನಮ್ಮ ಸಲಹೆಯನ್ನು ಕೇಳಲಿಲ್ಲ, ಮದುವೆಯಾಗಲಿಲ್ಲ.. ಮದುವೆಯಾಗಬೇಕಿತ್ತು … ಅಭಿ ಭೀ ಸಮಯ್ ಬೀತಾ ನಹೀ ಹೈ, ಶಾದಿ ಕರಿಯೇ ಔರ್ ಹಮ್ ಲೋಗ್ ಬಾರಾತಿ ಚಲೇನ್ (ಇನ್ನೂ ತಡವಾಗಿಲ್ಲ. ಮದುವೆಯಾಗಿ, ನಾವು ಮದುವೆ ದಿಬ್ಬಣದಲ್ಲಿ ಬರ್ತೀವಿ) ಎಂದು ಲಾಲು ಪ್ರಸಾದ್ ಯಾದವ್ ಹೇಳಿದ್ದರು.

ಅಂದಹಾಗೆ, ಅನೇಕ ರಾಜಕೀಯ ಪಂಡಿತರು ಈ ಸಲಹೆಯನ್ನು ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಪ್ರಾಯಪಟ್ಟಿದ್ದರು.

ಜುಲೈ 17-18 ರಂದು ವಿರೋಧ ಪಕ್ಷಗಳ ಸಭೆಗಾಗಿ ಗುರುವಾರ ಬೆಳಗ್ಗೆ ಬೆಂಗಳೂರಿಗೆ ಪ್ರಯಾಣಿಸುವುದಾಗಿ ಲಾಲು ಪ್ರಸಾದ್ ಹೇಳಿದ್ದಾರೆ. ರಕ್ತ ಪರೀಕ್ಷೆ ಸೇರಿದಂತೆ ನಿತ್ಯದ ವೈದ್ಯಕೀಯ ಪರೀಕ್ಷೆಗಾಗಿ ನಾನು ದೆಹಲಿಗೆ ಹೋಗುತ್ತಿದ್ದೇನೆ, ನಂತರ ನಾನು ಮತ್ತೆ ಪಾಟ್ನಾಗೆ ಬರುತ್ತೇನೆ. ಇದಾದ ನಂತರ ವಿರೋಧ ಪಕ್ಷಗಳ ಸಭೆಗಾಗಿ ಬೆಂಗಳೂರಿಗೆ ಹೋಗುತ್ತೇನೆ.2024 ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಿಂದ ಮೋದಿ ಪದಚ್ಯುತಿಗೆ ವೇದಿಕೆ ಸಿದ್ಧಪಡಿಸುತ್ತೇನೆ ಎಂದು ಪಾಟ್ನಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಲಾಲು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw


ವಿಡಿಯೋ ನೋಡಿ:

ಇತ್ತೀಚಿನ ಸುದ್ದಿ