ಚಾರ್ಮಾಡಿ ಘಾಟ್ ರಸ್ತೆ ತಿರುವಿನಲ್ಲಿ ಕೆಎಸ್ ಆರ್ ಟಿಸಿ ಬಸ್ ನ ಸ್ಟೇರಿಂಗ್ ಕಟ್!

ksrtc bus
27/02/2025

ಚಾರ್ಮಾಡಿ ಘಾಟ್: ಕೆಎಸ್ ಆರ್ ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ತುಂಡಾಗಿದರೂ ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17–F–1487 ನಂಬರಿನ ಶಿವಮೊಗ್ಗ ವಿಭಾಗದ ಬಸ್ ಚಾರ್ಮಾಡಿ ಘಾಟ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಹಠಾತ್ ಸ್ಟೀರಿಂಗ್ ಜಾಯಿಂಟ್ ಕಟ್ ಆಗಿತು. ಆದರೆ, ಚಾಲಕ ಎಚ್ಚರಿಕೆಯಿಂದ ಬಸ್ ನ್ನು ನಿಯಂತ್ರಣಕ್ಕೆ ತಂದು, ಅಪಘಾತವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಮಯೋಚಿತ ನಿರ್ವಹಣೆಯಿಂದ ಪ್ರಯಾಣಿಕರು ಯಾವುದೇ ಗಾಯಗಳಾಗದೆ ಸುಕ್ಷಿತರಾಗಿದ್ದು, ಪ್ರಯಾಣಿಕರನ್ನು ಬದಲಿ ಬಸ್ ನಲ್ಲಿ ಕಳುಸಿಕೊಡಲಾಯಿತು.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ, ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ಬಸ್ ತೆರಳುತ್ತಿತ್ತು. ಬಸ್ಸಿನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಹಿಂದೆ ಅನಾಹುತ ನಡೆದಿತ್ತು:

ಇದಕ್ಕೂ ಮೊದಲು, 2023 ಸೆಪ್ಟೆಂಬರ್ 27ರಂದು, ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ತರೀಕೆರೆ ತಾಲೂಕಿನ ಬೆಟ್ಟದಹಳ್ಳಿ ಸಮೀಪ ಡಿವೈಡರ್ ಗೆ ಡಿಕ್ಕಿಯಾಗಿ ಏಳು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಡೆದಿತ್ತು.

ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಕಾಮಗಾರಿ, ದಟ್ಟ ಮಂಜು, ಮತ್ತು ಕಾಡಾನೆಗಳ ಸಂಚಾರದಿಂದಾಗಿ ಅಪಘಾತಗಳ ಸಂಭವ ಹೆಚ್ಚಾಗಿದೆ. 2023 ಸೆಪ್ಟೆಂಬರ್ 8ರಂದು, ದಟ್ಟ ಮಂಜಿನಿಂದಾಗಿ ಎರಡು ಅಪಘಾತಗಳು ಸಂಭವಿಸಿದ್ದವು. 2024 ಜೂನ್ 13ರಂದು, ಕೆಎಸ್ ಆರ್ ಟಿಸಿ ಬಸ್ಸಿಗೆ ಕಾಡಾನೆ ಅಡ್ಡ ಬಂದ ಘಟನೆ ಸಂಭವಿಸಿದೆ.

ಈ ಹಿನ್ನೆಲೆಯಲ್ಲಿ, ಚಾಲಕರು ಮತ್ತು ಪ್ರಯಾಣಿಕರು ಚಾರ್ಮಾಡಿ ಘಾಟಿಯಲ್ಲಿ ಪ್ರಯಾಣಿಸುವಾಗ ಹೆಚ್ಚಿನ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ

Exit mobile version